ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ರಾಮನಗರಕ್ಕೆ ವರ್ಗಾವಣೆ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ...
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ.
ಮೊದಲಿಗೆ ನಾಲ್ವರು ಐಪಿಎಲ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಇದೀಗ ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರನ್ನು ರಾಮನಗರದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇದುವರೆಗೂ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇನ್ನು ಹಿರಿಯ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀನಾರಾಯಣ್ ರನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.