ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಾಳೆಯೇ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿ: ಸುಪ್ರೀಂ ಕೋರ್ಟ್

ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು.. ಯಾರಿಗೂ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 18 May 2018, 12:18 pm
ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು.. ಯಾರಿಗೂ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸರ್ಕಾರ ನಾಳೆ(ಶನಿವಾರ) ಸಂಜೆ ನಾಲ್ಕು ಗಂಟೆಗೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್​ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಈ ಬಗ್ಗೆ ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಕಾಲಾವಕಾಶ ನೀಡಲು ಸಾಧ್ಯವಿಲ್ಲ. ನಾಳೆಯೇ ವಿಶ್ವಾಸಮತ ಯಾಚನೆಯಾಗಲಿ ಎಂದು ಆದೇಶ ನೀಡಿದೆ.

Advertisement

Advertisement


ಇದೊಂದು ನಂಬರ್ ಗೇಮ್.. ಅತೀ ಹೆಚ್ಚು ಸಂಖ್ಯೆಯ ಅಥವಾ ಬಹುಮತ ಪಡೆದ ಪಕ್ಷವನ್ನು ಸರ್ಕಾರ ರಚನೆಗೆ ಆಹ್ವಾನಿಸಿರುವುದು ಸರಿಯಾದ ಕ್ರಮ. ಆದರೆ ವಿಶ್ವಾಸಮತ ಯಾಚನೆ ಸೂಕ್ತ ನಿರ್ಧಾರವಾಗುತ್ತದೆ. ಹೀಗಾಗಿ ನಾಳೆ ಸಂಜೆ ನಾಲ್ಕು ಗಂಟೆಗೆ ವಿಶ್ವಾಸಮತ ಯಾಚನೆ ನಡೆಯಲಿದ್ದು, ಅದಕ್ಕಿಂತ ಮೊದಲೇ ಶಾಸಕರ ಪ್ರಮಾಣ ವಚನ ಸ್ವೀಕಾರ ನಡೆಯಬೇಕು. ಶಾಸಕರಿಗೆ ಬೇಕಾದ ಸೂಕ್ತ ವ್ಯವಸ್ಥೆ ಮತ್ತು ಭದ್ರತೆಯನ್ನು ಡಿಜಿಪಿ ನೋಡಿಕೊಳ್ಳಬೇಕು. ಅಲ್ಲದೆ ವಿಶ್ವಾಸಮತ ಯಾಚನೆಗೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನೂ ಡಿಜಿ ಮತ್ತು ಐಜಿಪಿ ನೋಡಿಕೊಳ್ಳಬೇಕು. ವಿಶ್ವಾಸಮತ ಯಾಚನೆಗೂ ಮೊದಲು ಶಾಸಕರು ಕಡ್ಡಾಯವಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಹೇಳಿದೆ.

ಇದೇ ವೇಳೆ ವಿಧಾನಸಭೆಗೆ ಸ್ಪೀಕರ್ ಆಯ್ಕೆ ಆಗಿರಬೇಕಿರುವುದರಿಂದ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಲಾಗಿದ್ದು, ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಹೇಗೆ ನಡೆಯಬೇಕು ಎಂಬ ನಿರ್ಧಾರ ಸಂಪೂರ್ಣವಾಗಿ ಹಂಗಾಮಿ ಸ್ಪೀಕರ್ ಅವರ ವಿವೇಚನೆಗೆ ಬಿಟ್ಟಿದ್ದು. ವಿಶ್ವಾಸಮತ ಯಾಚನೆವರೆಗೂ ಸಿಎಂ ಯಡಿಯೂರಪ್ಪ ಅವರ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳದಂತೆಯೂ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. 
ಇದಲ್ಲದೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ವೇಳೆ ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ರಾಜ್ಯ ಪಾಲರ ವಿವೇಚನಾಧಿಕಾರ ಸರಿಯೋ ತಪ್ಪೇ ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಶ್ವಾಸಮತ ಯಾಚನೆಗೂ ಮೊದಲು ಆಂಗ್ಲೋ ಇಂಡಿಯನ್ ನಾಮ ನಿರ್ದೇಶನ ಬೇಡ
ಇದೇ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಪರ ವಕೀಲರ ಮನವಿಗೆ ಸ್ಪಂಧಿಸಿದ ಸುಪ್ರೀಂ ಕೋರ್ಟ್, ವಿಶ್ವಾಸಮತ ಯಾಚನೆಗೂ ಮೊದಲು ಆಂಗ್ಲೋ ಇಂಡಿಯನ್ ನಾಮ ನಿರ್ದೇಶನ ಅಥವಾ ನೇಮಕ ಬೇಡ ಎಂದು ತ್ರಿಸದಸ್ಯ ಪೀಠ ಆದೇಶಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement