ಬಸವನಬಾಗೇವಾಡಿ: 8 ವಿವಿ ಪ್ಯಾಟ್ ಪತ್ತೆ, ಚುನಾವಣಾ ಅಕ್ರಮದ ಶಂಕೆ
ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಮತ ಖಾತ್ರಿ ಯಂತ್ರ (ವಿವಿಪ್ಯಾಟ್ ಯಂತ್ರ)ಗಳು ಖಾಲಿ ಇರುವ ಸ್ಥಿತಿಯ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚುನಾವಣಾ ಅಕ್ರಮ ನಡೆದಿರುವ ಸಾಧ್ಯತೆಯ ಬಗ್ಗೆ ಶಂಕೆ ಮೂಡಿಸಿದೆ.
ಬಸವನಬಾಗೇವಾಡಿ: ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಮತ ಖಾತ್ರಿ ಯಂತ್ರ (ವಿವಿಪ್ಯಾಟ್ ಯಂತ್ರ)ಗಳು ಖಾಲಿ ಇರುವ ಸ್ಥಿತಿಯ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚುನಾವಣಾ ಅಕ್ರಮ ನಡೆದಿರುವ ಸಾಧ್ಯತೆಯ ಬಗ್ಗೆ ಶಂಕೆ ಮೂಡಿಸಿದೆ.
ರಾಷ್ಟ್ರೀಯ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿರುವ ಕಾರ್ಮಿಕರು ವಿವಿಪ್ಯಾಟ್ ಯಂತ್ರಗಳನ್ನು ಶೆಡ್ ನಲ್ಲಿ ಸಂಗ್ರಹಿಸಿಟ್ಟಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ‘ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ಮರು ಚುನಾವಣೆ ನಡೆಸಬೇಕು’ ಎಂದು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಿಬಿಐ ತನಿಖೆ ನಡೆಸಲು ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ನ ಅಬ್ದುಲ್ ಹಮೀದ್ ಮುಶ್ರೀಫ್ ಆಗ್ರಹಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.