ಜುಲೈಯಲ್ಲಿ ಮೈಸೂರಿನ ಜಯದೇವ ಆಸ್ಪತ್ರೆ ಕಾರ್ಯಾರಂಭ
ಜಯದೇವ ಹೃದ್ರೋಗ ಸಂಸ್ಥೆಯ 350 ಹಾಸಿಗೆಗಳ ನೂತನ ಆಸ್ಪತ್ರೆ ಮೈಸೂರಿನ ಕೆಆರ್ ಎಸ್ ...
ಮೈಸೂರು: ಜಯದೇವ ಹೃದ್ರೋಗ ಸಂಸ್ಥೆಯ 350 ಹಾಸಿಗೆಗಳ ನೂತನ ಆಸ್ಪತ್ರೆ ಮೈಸೂರಿನ ಕೆಆರ್ ಎಸ್ ರಸ್ತೆಯಲ್ಲಿರುವ ಪಿಕೆಟಿಬಿ ಆವರಣದಲ್ಲಿ ಜುಲೈಯಿಂದ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ.
ಕಳೆದ ಮಾರ್ಚ್ 10ರಂದೇ ಈ ಆಸ್ಪತ್ರೆ ಉದ್ಘಾಟನೆಗೊಂಡಿದ್ದರೂ ಸಹ ಸಂಪೂರ್ಣವಾಗಿ ಸುಸಜ್ಜಿತವಾಗಬೇಕಷ್ಟೆ. ಉಪಕರಣಗಳನ್ನು ಸ್ಥಾಪಿಸುವ ಕಾರ್ಯ ಅಂತಿಮ ಹಂತದಲ್ಲಿದೆ. ಸುಮಾರು 210 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಆಸ್ಪತ್ರೆ ನಿರ್ದೇಶಕ ಡಾ.ಸಿ. ಮಂಜುನಾಥ್, ಉಪಕರಣಗಳನ್ನು ಸಂಪೂರ್ಣವಾಗಿ ಸ್ಥಾಪಿಸಿದ ನಂತರ ಕಾರ್ಯಾರಂಭ ಮಾಡಲಿದೆ. ಬೆಂಗಳೂರಿನ ಆಸ್ಪತ್ರೆಯಂತೆ ಮೈಸೂರಿನ ಆಸ್ಪತ್ರೆ ಕೂಡ ರೋಗಿಗಳಿಗೆ ಉತ್ತಮ ಸೇವೆ ಮತ್ತು ರಿಯಾಯಿತಿ ದರದಲ್ಲಿ ಕೆಲವೊಂದು ಆರೋಗ್ಯ ಸೇವೆಗಳನ್ನು ಒದಗಿಸಲಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.