ನವದೆಹಲಿ: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ಅಸಾಂವಿಧಾನಿಕವಾಗಿಡೆ ಎಂದು ಸಲ್ಲಿಸಲಾಗಿದ್ದ ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ಮಂಗಲವಾರ ನಿರಾಕರಿಸಿದೆ.
ಮೇ.23 ಬುಧವಾರ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ಶಕ್ತಿಸೌಧ ವಿಧಾನಸೌಧದ ಮುಂದೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಪ್ರಮಾಣವಚನಕ್ಕೆ ಹಿಂದೂ ಮಹಾಸಭಾ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರಮಾಣವಚನ ಸ್ವೀಕರಿಸುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಪ್ರಮಾಣವಚನ ಅಸಾಂವಿಧಾನಿಕವಾಗಿದ್ದು, ಈ ಕುರಿತ ಅರ್ಜಿಯನ್ನು ತ್ವರಿತ ವಿಚಾರಣೆ ನಡೆಸಿ, ಪ್ರಮಾಣ ವಚನ ಸಮಾರಂಭಕ್ಕೆ ತಡೆಯೊಡ್ಡಬೇಕೆಂದು ಅರ್ಜಿಯಲ್ಲಿ ತಿಳಿಸಲಾಗಿತ್ತು. ಆದರೆ, ಈ ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸಲು ನ್ಯಾಯಾಲಯ ತಿರಸ್ಕರಿಸಿದೆ.