ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ಎರಡು ಶಂಕಿತ ನಿಫಾ ಪ್ರಕರಣ ಪತ್ತೆ

ಕೇರಳದಲ್ಲಿ ಈಗಾಗಲೇ 10 ಮಂದಿಯನ್ನು ಬಲಿ ಪಡೆದ ನಿಫಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರಡಿರುವ ಶಂಕೆ...

ಮಂಗಳೂರು: ಕೇರಳದಲ್ಲಿ ಈಗಾಗಲೇ 10 ಮಂದಿಯನ್ನು ಬಲಿ ಪಡೆದ ನಿಫಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹರಡಿರುವ ಶಂಕೆ ವ್ಯಕ್ತವಾಗಿದೆ. 
ಇಂದು ನಗರದ ಖಾಸಗಿ ಆಸ್ಪತ್ರೆ ಮತ್ತು ಸರ್ಕಾರಿ ಆಸ್ಪತ್ರೆಯಿಂದ ತಲಾ ಒಂದು ಶಂಕಿತ ನಿಫಾ  ಪತ್ತೆಯಾಗಿದ್ದು, ಆ ಇಬ್ಬರು ರೋಗಿಯ ಗಂಟಲು ದ್ರವದ ಮಾದರಿಯನ್ನು ಮಣಿಪಾಲ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇದು ನಿಫಾ ಸೋಂಕು ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರಿಂದ ಇಬ್ಬರು ರೋಗಿಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ, ಇದುವರೆಗೆ ಪ್ರಯೋಗಾಲಯದ ವರದಿ ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣರಾವ್‌ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಒಬ್ಬ ರೋಗಿ ಕೇರಳದಿಂದ ಇಲ್ಲಿಗೆ ಬಂದಿದ್ದು, ಅವರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇನ್ನೊಬ್ಬ ರೋಗಿ ಸ್ಥಳೀಯ ವ್ಯಕ್ತಿ. ಆದರೆ, ಇದುವರೆಗೂ ಜಿಲ್ಲೆಯಲ್ಲಿ ನಿಫಾ ಪ್ರಕರಣ ದೃಢಪಟ್ಟಿಲ್ಲ ಎಂದು ಡಾ.ರಾಮಕೃಷ್ಣರಾವ್‌ ಅವರು ಹೇಳಿದ್ದಾರೆ.
ರೋಗಿಗಳ ರಕ್ತದ ಮಾದರಿಯಲ್ಲಿ ಪಾಸಿಟೀವ್ ಬಂದರೆ ಪುಣೆಯ ಪ್ರಯೋಗಾಲಯಕ್ಕೆ ಮಾದರಿ ರವಾನಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT