ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ರಾಜ್ಯ

ಪ್ರಮಾಣವಚನಕ್ಕೆ ಸಾಕ್ಷಿಯಾಗಲು, ಒಗ್ಗಟ್ಟು ಪ್ರದರ್ಶಿಸಲು ನಗರಕ್ಕೆ ಬಂದಿದ್ದೇವೆ: ಮಮತಾ ಬ್ಯಾನರ್ಜಿ, ನಾಯ್ಡು

ಒಗ್ಗಟ್ಟು ಪ್ರದರ್ಶಿಸಲು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರು ನಗರಕ್ಕೆ ಬಂದಿದ್ದೇವೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ...

ಬೆಂಗಳೂರು: ಒಗ್ಗಟ್ಟು ಪ್ರದರ್ಶಿಸಲು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಲು ಬೆಂಗಳೂರು ನಗರಕ್ಕೆ ಬಂದಿದ್ದೇವೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ. 
ನಗರಕ್ಕೆ ಆಗಮಿಸಿರುವ ಚಂದ್ರಬಾಬು ನಾಯ್ಡು ಹಾಗೂ ಮಮತಾ ಬ್ಯಾನರ್ಜಿಯವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು, ರಾಷ್ಟ್ರೀಯ ಹಿತಾಸಕ್ತಿಗಾಗಿ ಭವಿಷ್ಯದಲ್ಲಿ ಒಟ್ಟಾಗಿ ಕೆಲಸ ಮಾಡಲು ಹಾಗೂ ಸ್ಥಳೀಯ ಪಕ್ಷಗಳ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಇಲ್ಲಿಗೆ ಬಂದಿದ್ದೇವೆಂದು ಹೇಳಿದ್ದಾರೆ. 
ಈ ನಡುವೆ ಸಮಾರಂಭಕ್ಕೆ ಸಾಕ್ಷಿಯಾಗಲು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ, ಶರದ್ ಪವಾರ್ ಹಾಗೂ ಅಖಿಲೇಶ್ ಯಾದವ್ ಅವರೂ ಕೂಡ ನಗರಕ್ಕೆ ಆಗಮಿಸಿದ್ದಾರೆಂದು ತಿಳಿದುಬಂದಿದೆ. 
ಇಂದು ಸಂಜೆ 4.30ಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. 
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ ಬಳಿಕ ಜೆಡಿಎಸ್'ಗೆ ಮುಖ್ಯಮಂತ್ರಿ ಹುದ್ದೆ ಬಹುತೇಕ ಖಚಿತವಾಗಿತ್ತು. ಇದರಂತೆ ಕಂಠೀರವ ಕ್ರೀಡಾಂಗಣದಲ್ಲಿ ಲಕ್ಷಾಂತರ ಜನಸ್ತೋಮದ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸುವುದನ್ನು ಸ್ಥಗಿತಗೊಳಿಸಿ, ಅರಮನೆ ಮೈದಾನದಲ್ಲಿ ನಡೆಸುವ ಬಗ್ಗೆ ಆಲೋಚನೆಗಳು ನಡೆದಿತ್ತು. ಆದರೆ, ಆ ಸ್ಥಳವು ಸರಿಕಾಣದ ಹಿನ್ನಲೆಯಲ್ಲಿ ಅಂತಿಮವಾಗಿ ವಿಧಾನಸೌಧದ ಮುಂದೆಯೇ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸಲು ಜೆಡಿಎಸ್-ಕಾಂಗ್ರೆಸ್ ತೀರ್ಮಾನಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?