ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಡಿಜಿಪಿ ನೀಲಮಣಿ ರಾಜು ವರ್ಗಾವಣೆ ಸುದ್ದಿ: ರಾಜ್ಯ ಸರ್ಕಾರ ನಿರಾಕರಣೆ

ರಾಜ್ಯದ ಮೊದಲ ಮಹಿಳಾ ಡಿಜಿಪಿ ನೀಲಮಣಿ ರಾಜು ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಈ ಸುದ್ದಿಯನ್ನು ರಾಜ್ಯಸರ್ಕಾರ ನಿರಾಕರಿಸಿದೆ.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
Nagaraja AB
Updated On : 26 May 2018, 12:15 pm
ಬೆಂಗಳೂರು:  ರಾಜ್ಯದ ಮೊದಲ ಮಹಿಳಾ ಡಿಜಿಪಿ  ನೀಲಮಣಿ ರಾಜು ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಈ ಸುದ್ದಿಯನ್ನು ರಾಜ್ಯ ಸರ್ಕಾರ ನಿರಾಕರಿಸಿದೆ.
ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಯಾವುದೇ ಆಡಳಿತಾತ್ಮಕ ನಿರ್ಣಯ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ, ಈ ಸಂಬಂಧ ಕೆಲ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.
ಕುಮಾರಸ್ವಾಮಿ ಪದಗ್ರಹಣ ಸಮಾರಂಭದ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ  ಸರ್ಕಾರ ನೀಲಮಣಿ ರಾಜು ಅವರ ಬಗ್ಗೆ ಅಸಮಾಧಾನಗೊಂಡಿದೆ.

Advertisement

Advertisement

ವಿಧಾನಸೌಧದವರೆಗೂ ವಾಹನ ನಿರ್ಬಂಧಿಸಿದ್ದರಿಂದ ಮಮತಾ ಬ್ಯಾನರ್ಜಿ ಜನರಲ್ ಪೋಸ್ಟ್ ಆಫೀಸ್ ನಿಂದ ವಿಧಾನಸೌಧದವರೆಗೂ ನಡೆದು ಸಾಗಿದ್ದರು. ಈ ಸಂಬಂಧ ಕುಮಾರಸ್ವಾಮಿ ನೀಲಮಣಿ ರಾಜು ಅವರಿಗೆ ನೋಟಿಸ್ ನೀಡಿದ್ದು, ವಿವರಣೆ ಕೇಳಿದ್ದಾರೆ ಎಂಬ ಮಾಹಿತಿ ಕೇಳಿಬಂದಿತ್ತು.
ಈ ಘಟನೆ ನಡೆದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಾಗಿತ್ತು. ನ್ಯೂಸ್ ವೆಬ್ ಸೈಟ್ ಮಾಹಿತಿ 19 ಸಾವಿರಕ್ಕೂ ಹೆಚ್ಚು ಬಾರಿ ಹಂಚಿಕೆಯಾಗಿತ್ತು. ಫೇಸ್ ಬುಕ್ ನಲ್ಲಿ  5 ಸಾವಿರ ಹಂಚಿಕೆಯಾಗಿತ್ತು .
ಆದಾಗ್ಯೂ, ಈ  ಮಾಹಿತಿಯನ್ನು  ರಾಜ್ಯಸರ್ಕಾರ ಹಾಗೂ ಡಿಜಿ, ಐಜಿಪಿ ಕಾರ್ಯಾಲಯ ತಳ್ಳಿಹಾಕಿದೆ. ಗೃಹ ಇಲಾಖೆಯಿಂದ ಇತಂಹ ಯಾವುದೇ ಪ್ರಸ್ತಾವ ಆದೇಶ ಆಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments