ಬೆಂಗಳೂರು: ಬೆಂಗಳೂರಿನಿಂದ ತಮಿಳುನಾಡಿನ ಊಟಿಗೆ ಪ್ರವಾಸಕ್ಕೆಂದು ತೆರಳಿದ್ದ 30 ಜನರಿದ್ದ ಖಾಸಗಿ ಬಸ್ ಮಧ್ಯರಾತ್ರಿ ಪ್ರಪಾತಕ್ಕೆ ಬಿದ್ದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ 30 ಜನರ ತಂಡ ಊಟಿಗೆ ಪ್ರವಾಸಕ್ಕೆ ತೆರಳಿದ್ದು ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ಬಸ್ 500 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದು ಈ ಘಟನೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು 10 ಮಂದಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ನಿವಾಸಿಗಳು ಎಂದು ತಿಳಿದುಬಂದಿದೆ. ಊಟಿಯಲ್ಲಿ ಪ್ರವಾಸಿ ಸ್ಥಳಗಳ ವೀಕ್ಷಣೆ ಮುಗಿಸಿ ರಾತ್ರಿ ಮಡಿಕೇರಿಗೆ ತೆರಳುತ್ತಿದ್ದರು. ಈ ವೇಳೆ ತವಲಮಲೈ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರವಾಸಕ್ಕೆ ಉರುಳಿ ಬಿದ್ದಿದೆ.