ಸಿದ್ದು ನ್ಯಾಮಗೌಡ 
ರಾಜ್ಯ

ಅಪಘಾತದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ನಿಧನ

ಗೋವಾದಿಂದ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ವಿಧಿವಶರಾಗಿದ್ದಾರೆ...

ಬಾಗಲಕೋಟೆ: ಗೋವಾದಿಂದ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ವಿಧಿವಶರಾಗಿದ್ದಾರೆ. 
70 ವರ್ಷದ ಸಿದ್ದು ನ್ಯಾಮಗೌಡ ಅವರು ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಬಾಗಲಕೋಟೆಯ ತುಳುಸಿಗೇರಿ ಬಳಿ ಎದುರಿಗೆ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸಿದ್ದು ನ್ಯಾಮಗೌಡ ಅವರು ಮೃತಪಟ್ಟಿದ್ದಾರೆ. 
ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರ ಎದುಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ಆದರೆ ಬದುಕಿಸಿಕೊಳ್ಳುವ ಆಸೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ವೈದ್ಯರು ಸಿದ್ದು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. 
ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಸ್ಥಳಕ್ಕೆ ಪೊಲೀಸರು ದಾವಿಸಿ ಪರಿಶೀಲನೆ ನಡೆಸಿದ್ದಾರೆ. 
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ನ್ಯಾಮಗೌಡ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ನವದೆಹಲಿ: ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

SCROLL FOR NEXT