ನೂತನ ಎಜಿ ಉದಯ್ ಹೊಳ್ಳ 
ರಾಜ್ಯ

ರಾಜ್ಯ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಉದಯ್ ಹೊಳ್ಳ ನೇಮಕ

ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ನೇಮಕ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ರಾಜ್ಯ ಸರ್ಕಾರ ಹಿರಿಯ ನ್ಯಾಯವಾದಿ ಉದಯ್ ಹೊಳ್ಳ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಿದೆ. 
ಉದಯ್ ಹೊಳ್ಳರನ್ನು ಎಜಿ ಆಗಿ ನೇಮಿಸಿ ರಾಜ್ಯಪಾಲರು ಇಂದು ಸಂಜೆ ಆದೇಶ ಹೊರಡಿಸಿದ್ದಾರೆ. ಮೇ 30 ರಂದು ಉದಯ್ ಹೊಳ್ಳ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ, ಜೆಡಿಎಸ್ – ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಜಿಯಾಗಿದ್ದ ಉದಯ್ ಹೊಳ್ಳ 2006 ರಿಂದ 2009 ರವರೆಗೂ ಅಡ್ವೋಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.
ಉದಯ್ ಹೊಳ್ಳ, ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರಿನ ಮೂಲದವರಾಗಿದ್ದು, ಈ ಹಿಂದೆ, ಪ್ರಭುಲಿಂಗ ನಾವಡಗಿ ರಾಜ್ಯ ಎಜಿ ಆಗಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ನೇಮಕಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?