ಸುನೀಲ್ ಕುಮಾರ್ 
ರಾಜ್ಯ

ಚಿಂತಾಮಣಿ: ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹೋಂಗಾರ್ಡ್

ಬೆಂಗಳೂರಿನ ಹಲಸೂರಿನಲ್ಲಿ ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸುನೀಲ್ ಕುಮಾರ್ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಮಾತ್ರೆ ಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಚಿಂತಾಮಣಿ: ಬೆಂಗಳೂರಿನ ಹಲಸೂರಿನಲ್ಲಿ ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸುನೀಲ್ ಕುಮಾರ್ ಜೀವನದಲ್ಲಿ ಜಿಗುಪ್ಸೆಗೊಂಡು ಕ್ರಿಮಿನಾಶಕ ಮಾತ್ರೆ ಸೇವಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ರಜೆ ಮೇಲೆ ತಮ್ಮ ಊರಾದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮಕ್ಕೆ ಬಂದಿದ್ದ ಸುನಿಲ್ ಕುಮಾರ್ ಕಳೆದ ರಾತ್ರಿ ತಮ್ಮ ಮನೆಯಲ್ಲಿ ವಿಷ ಸೇವಿಸುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ. 
ಇದನ್ನು ಕಂಡ ಪೋಷಕರು  ತಕ್ಷಣ ಮಾತ್ರೆ ಸೇವಿಸಿ ನಿತ್ರಾಣಗೊಂಡಿದ್ದ ಸುನೀಲ್ ಕುಮಾರ್ ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು ಪ್ರಯೋಜನವಾಗದೇ ಸುನೀಲ್ ಮೃತಪಟ್ಟಿದ್ದಾರೆ. 
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!