ಬೆಂಗಳೂರು: ಭಾರತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಾವು ಜೂನ್ 7ರ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರು ಆಶಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಸಿಕೆ ಜಾಫರ್ ಶರೀಫ್ ಸೇರಿ ಅನೇಕ ಕಾಂಗ್ರೆಸ್ ನಾಯಕರು ಪ್ರಣಬ್ ಮುಖರ್ಜಿ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ನಿಮ್ಮಂತಹಾ ಮೇರು ವ್ಯಕ್ತಿಗಳು, ಜಾತ್ಯಾತೀತತೆ, ತತ್ವದಲ್ಲಿ ನಂಬಿಕೆ ಇರುವವರು, ರಾಷ್ಟ್ರಪತಿ ಸೇರಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದವರು ಆರ್ ಎಸ್ ಎಸ್, ಸಂಘ ಪರಿವಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಸೂಕ್ತವಲ್ಲ, ನಿಮ್ಮ ನಿರ್ಧಾರವನ್ನು ಇನ್ನೊಮ್ಮೆ ಪರಿಶೀಲಿಸಿ ಎಂದು ವಿನಂತಿಸುತ್ತೇವೆ" ಕಾಂಗ್ರೆಸ್ ಮುಖಂಡರು ಮಾಜಿ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.