ಕೆ,ಎಸ್ ಭಗವಾನ್ ಮತ್ತು ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಪ್ರಕರಣ, ಕೆ.ಎಸ್‌.ಭಗವಾನ್‌ ಕೊಲೆಗೆ ಸಂಚು: ನಾಲ್ವರ ಬಂಧನ

ತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಮತ್ತು ಪ್ರೊ.ಕೆ.ಎಸ್‌.ಭಗವಾನ್‌ ಹತ್ಯೆಗೆ ಸಂಚು ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಮತ್ತು ಎಸ್‌ಐಟಿ ಅಧಿಕಾರಿಗಳು ...

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಮತ್ತು ಪ್ರೊ.ಕೆ.ಎಸ್‌.ಭಗವಾನ್‌ ಹತ್ಯೆಗೆ ಸಂಚು ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಮತ್ತು ಎಸ್‌ಐಟಿ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಪ್ರವೀಣ್ ಅಲಿಯಾಸ್ ಸುಜಿತ್ ಕುಮಾರ್, ಅಮೂಲ್ ಕಾಳೆ, ಅಮಿತ್ ದಿಗ್ವೇಕರ್ ಅಲಿಯಾಸ್ ಪ್ರದೀಪ್ ಮಹಾಜನ್ ಮತ್ತು ಮನೋಹರ್ ದುಂಡಪ್ಪ ಯಾವಡೆ. ಕಾಳೆ ಮತ್ತು ದಿಗ್ವೇಕರ್ ಮಹಾರಾಷ್ಟ್ರ ಮೂಲದವರಾದರೇ ಯಾವಡೆ ವಿಜಯಾಪುರ ಜಿಲ್ಲೆಯವನಾಗಿದ್ದಾನೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ ನವೀನ್ ಕುಮಾರ್ ವಿಚಾರಣೆ ವೇಳೆ  ನೀಡಿದ ಮಾಹಿತಿ ಆಧಾರದ ಮೇಲೆ ಪ್ರವೀಣ್ ನನ್ನು ಬಂಧಿಸಿದ್ದ ಪೊಲೀಸರು ಆತ ನೀಡಿದ ಮಾಹಿತಿ ಮೇಲೆ ಉಳಿದ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರವೀಣ್ ನೀಡಿದ ಮಾಹಿತಿ ಪ್ರಕಾರ ಮೂವರನ್ನು ಪೊಲಿಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ, ಕಸ್ಟಡಿಗೆ ತೆಗೆದುಕೊಳ್ಳುವ ಮುನ್ನ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,
ಬಂಧಿತ ಆರೋಪಿಗಳು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೈವಾಡವಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, 2015ರ ಸೆಪ್ಟಂಬರ್ 9 ರಂದು ನಿವೃತ್ತ ಪ್ರೊಫೆಸರ್ ಕೆ.ಎಸ್ ಭಗವಾನ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದರಲ್ಲಿ ತಮ್ಮ ಪಾತ್ರವಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಎಂ.ಎಂ ಕಲ್ಬುರ್ಗಿ, ಹಾಗೂ ನರೇಂದ್ರ ದಾಬೋಲ್ಕರ್ ಅವರ ನಂತರ ಮುಂದಿನದ್ದು ನಿನ್ನ ಸರದಿ, ದಿನಗಳನ್ನು ಎಣಿಸುತ್ತಿರುವ ಎಂದು ಪತ್ರದಲ್ಲಿ ಬರೆಯಲಾಗಿತ್ತು. 
ಧಾರವಾಡದಲ್ಲಿ ಕಲಬುರ್ಗಿ ಅವರ ಹತ್ಯೆಯ ನಂತರ ಕೆಲ ದಿನಗಳ ನಂತರ ಭಗವಾನ್ ಅವರಿಗೆ ಬೆದರಿಗೆ ಪತ್ರ ಬಂದ ನಂತರ ಅವರಿಗೆ ಪೊಲೀಸರು ಭದ್ರತೆ ಒದಗಿಸಿದ್ದರು.
ಗೌರಿ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ, ಅನುಮಾನದ ಮೇಲೆ ಕೆಲ ಸಂಘಟನೆಗಳ ಮುಖಂಡರ ಹಾಗೂ ಕಾರ್ಯಕರ್ತರ ಮೊಬೈಲ್ ಸಂಭಾಷಣೆಯನ್ನು ಆಲಿಸಿದ್ದೆವು. ಆಗ ನವೀನ್ ಹಾಗೂ ಸುಜಿತ್, ಕೆ.ಎಸ್.ಭಗವಾನ್ ಅವರನ್ನು ಹತ್ಯೆಗೈಯ್ಯುವ ಬಗ್ಗೆ ಒಂದೂವರೆ ತಾಸು ಮೊಬೈಲ್ ಸಂಭಾಷಣೆ ನಡೆಸಿದ್ದರು. ಆ ಕೂಡಲೇ ಕಾರ್ಯಾಚರಣೆ ನಡೆಸಿ, ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನವೀನ್‌ನನ್ನು ವಶಕ್ಕೆ ಪಡೆದಿದ್ದೆವು. ಆ ನಂತರ ತಲೆಮರೆಸಿಕೊಂಡು ಓಡಾಡುತ್ತಿದ್ದ ಸುಜಿತ್‌ನನ್ನು ಇತ್ತೀಚೆಗೆ ಮಂಗಳೂರಿನಲ್ಲಿ ವಶಕ್ಕೆ ತೆಗೆದುಕೊಂಡೆವು ಎಂದು ಪೊಲೀಸರು ತಿಳಿಸಿದ್ದಾರೆ. ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಬುಧವಾರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT