ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ 
ರಾಜ್ಯ

ಯಾವುದೇ ಮುಲಾಜಿಗೆ ಒಳಗಾಗದೆ ಕೆಲಸ ಮಾಡಿ: ಪೊಲೀಸರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ

ಸರ್ಕಾರಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕಾನೂನು ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಬೆಂಗಳೂರು: ಸರ್ಕಾರಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇಂದು ಹಿರಿಯ ಪೊಲೀಸ್  ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕಾನೂನು ಪರಿಸ್ಥಿತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಜಡ್ಡುಗಟ್ಟಿರುವ  ಸರ್ಕಾರಿ ವ್ಯವಸ್ಥೆಯನ್ನು ಸರಿದಾರಿಗೆ ತಂದು  ಜನರ ಆಶಯಗಳಿಗೆ ಪೂರಕವಾಗಿ ಆಡಳಿತ ವ್ಯವಸ್ಥೆ ರೂಪಿಸಲು ಅಗತ್ಯವಾದ ಮಾರ್ಗೋಪಾಯಗಳನ್ನು ಬಗ್ಗೆ  ಹಿರಿಯ ಅಧಿಕಾರಿಗಳಿಂದ  ಮಾಹಿತಿ ಪಡೆದುಕೊಂಡರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬಾರಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿರುವ ಮುಖ್ಯಮಂತ್ರಿಗಳು  ಇಂದೂ ಕೂಡಾ  ಸುಧೀರ್ಘವಾಗಿ ಅಧಿಕಾರಿಗಳ ಜೊತೆ ಚರ್ಚಿಸಿ  ಪ್ರಗತಿ , ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ  ಎಚ್ಚರ ವಹಿಸಬೇಕು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಅವರ ಹಿತವನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ವ್ಯವಸ್ಥೆ ಕಾರ್ಯನಿರ್ವಹಿಸಬೇಕು, ಯಾವುದೇ ಮುಲಾಜಿಗೆ ದಾಕ್ಷಿಣ್ಯವಿಲ್ಲದೆ ಕೆಲಸ ಮಾಡಿ ಎಂದು  ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸಿ ಮಂಗಳೂರು ಸೇರಿದಂತೆ ಕೆಲ ಪ್ರದೇಶಗಳು ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆಯೂ  ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು.

ಮಂಗಳೂರು ಜಿಲ್ಲಾಡಳಿತಕ್ಕೆ ಈಗಾಗಲೇ ಹಲವು ಸೂಚನೆಗಳನ್ನು ನೀಡಿದ್ದೇನೆ. ಆ ಸೂಚನೆಗಳ ಬಗ್ಗೆ ಗಮನಹರಿಸಿ ಎಂದು ಅವರು ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಸಲಹೆ ಮಾಡಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಪೊಲೀಸ್ ಮಹಾನಿರ್ದೇಶಕ ನೀಲಮಣಿ ರಾಜು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು  ಸಭೆಯಲ್ಲಿ  ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!