ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯದಲ್ಲಿ ಮುಂಗಾರು ಅಬ್ಬರ ಆರಂಭವಾಗಿದ್ದು, ಮಂಗಳೂರಿನಲ್ಲಿ ಮಂಗಳವಾರ ಆರ್ಭಟಿಸಿದ್ದ ಮಳೆರಾಯ ಬೆಂಗಳೂರಿನಲ್ಲೂ ಅಬ್ಬರಿಸಿದ್ದಾನೆ.
ಬುಧವಾರ ರಾತ್ರಿ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದ್ದು, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ರಾಜಧಾನಿಯಲ್ಲಿ ಜನಜೀವನ ಅಸ್ಥವ್ಯಸ್ಥಗೊಂಡಿತ್ತು. ಕಚೇರಿಗಳಿಂದ ಮನೆಗೆ ತೆರಳುತ್ತಿದ್ದವರು ಮಳೆಯಿಂದಾಗಿ ಮನೆಗೆ ತೆರಳಲಾಗದೇ ಮರ, ಬಸ್ ನಿಲ್ದಾಣ, ರಸ್ತೆ ಬದಿಯ ಕಟ್ಟಗಳ ಆಶ್ರಯ ಪಡೆದಿದ್ದರು.
ಮಳೆಯಲ್ಲಿ ಎಂದಿನಂತೆ ಟ್ರಾಫಿಕ್ ಸಮಸ್ಯೆ ಕೂಡ ಹೆಚ್ಚಾಗಿತ್ತು. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಬೇಕಾಯಿತು. ಮೆಜೆಸ್ಟಿಕ್, ಶಾಂತಿನಗರ, ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿ. ಬನಶಂಕರಿ, ಮೈಸೂರು ರಸ್ತೆ, ಚಾಮರಾಜಪೇಟೆ ಸೇರಿದಂತೆ ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಬುಧವಾರ ಭಾರಿ ಮಳೆಯಾಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.