ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ನಟ ಪವನ್ ಕಲ್ಯಾಣ್ 
ರಾಜ್ಯ

'ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ'; ಕನ್ನಡಿಗರಿಗೆ ಕನ್ನಡದಲ್ಲೇ ನಟ ಪವನ್ ಕಲ್ಯಾಣ್ ಹೇಳಿದ್ದೇನು?

ಟಾಲಿವುಡ್​ ಪವರ್ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಿಗರಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

ಬೆಂಗಳೂರು: ಟಾಲಿವುಡ್​ ಪವರ್ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕನ್ನಡಿಗರಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.
63ನೇ ಕನ್ನಡ ರಾಜ್ಯೋತ್ಸವದ ನಿಮಿತ್ತ ನಟ ಪವನ್ ಕಲ್ಯಾಣ್ ಕನ್ನಡಿಗರಿಗೆ ಶುಭಾಶಯ ಕೋರಿದ್ದು, 'ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಕನ್ನಡದಲ್ಲೇ ಟ್ವೀಟ್​ ಮಾಡಿದ್ದಾರೆ. ಅಲ್ಲದೆ 'ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ' ಎಂಬ ಘೋಷಣೆಯನ್ನೂ ಕೂಗಿ ತಮ್ಮ ಕನ್ನಡ ಪ್ರೇಮ ಮೆರೆದಿದ್ದಾರೆ.
ಅಂತೆಯೇ ಇದೇ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಪವನ್ ಕಲ್ಯಾಣ್, 'ನನ್ನ ಪ್ರೀತಿಯ ಹಾಗೂ ಗೌರವಾನ್ವಿತ ಸಹೋದರ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ಎಲ್ಲ ದಿಕ್ಕುಗಳಲ್ಲಿ ವೇಗವಾಗಿ ಅಭಿವೃದ್ಧಿಯನ್ನು ಹೊಂದುತ್ತಿದೆ ಎಂಬುದನ್ನು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ