ದೀಪಾವಳಿ ಹಬ್ಬಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ರೈಲು!
ದೀಪಾವಳಿ ಹಬ್ಬಕ್ಕೆ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರು ಹೆಚ್ಚುವ ಸಾಧ್ಯತೆಯಿರುವುದರಿಂದ ನವೆಂಬರ್ 6 ರಂದು ಯಶವಂತಪುರದಿಂದ ಬೆಳಗಾವಿಗೆ ...
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರು ಹೆಚ್ಚುವ ಸಾಧ್ಯತೆಯಿರುವುದರಿಂದ ನವೆಂಬರ್ 6 ರಂದು ಯಶವಂತಪುರದಿಂದ ಬೆಳಗಾವಿಗೆ ತತ್ಕಾಲ್ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚರಿಸಲಿದೆ.
ನವೆಂಬರ್ 6ರಂದು ರಾತ್ರಿ 11.45ಕ್ಕೆ ಯಶವಂತಪುರದಿಂದ ಬೆಳಗಾವಿಗೆ 06581 ರೈಲು ಹೊರಡಲಿದ್ದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ತಲುಪಲಿದೆ,
ಇನ್ನೂ ನವೆಂಬರ್ 11 ರಂದು ಸಂಜೆ 5.20ಕ್ಕೆ ಬೆಳಗಾವಿಯಿಂದ ಹೊರಡುವ 06582 ಸಂಖ್ಯೆಯ ರೈಲು ಬೆಳಗ್ಗೆ 5 ಗಂಟೆಗೆ ಯಶವಂತಪುರ ತಲುಪಲಿದೆ,.ಈ ರೈಲುಗಳು, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡದಲ್ಲಿ ನಿಲುಗಡೆ ಮಾಡಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.