ಸನ್ನಿ ಲಿಯೋನ್ 
ರಾಜ್ಯ

ಬೆಂಗಳೂರಿಗೆ ಆಗಮಿಸಿದ ಸನ್ನಿ ಲಿಯೋನ್, ಸಂಗೀತ ಕಾರ್ಯಕ್ರಮಕ್ಕೆ ಭಾರಿ ಭದ್ರತೆ

ಮಾಜಿ ನೀಲಿ ತಾರೆ ಹಾಗೂ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ...

ಬೆಂಗಳೂರು: ಮಾಜಿ ನೀಲಿ ತಾರೆ ಹಾಗೂ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡ್ಯಾನ್ಸ್ ಮತ್ತು ಸಂಗೀತ ಕಾರ್ಯಕ್ರಮ ನಡೆಸಿಕೊಡಲು ಶನಿವಾರ ನಗರಕ್ಕೆ ಆಗಮಿಸಿದ್ದಾರೆ.
ಸನ್ನಿ ಲಿಯೋನ್ ಈಗಾಗಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ರಾತ್ರಿ 9 ಗಂಟೆಯ ನಂತರ ಕಾರ್ಯಕ್ರಮ ನಡೆಯಲಿರುವ ನಗರದ ಮಾನ್ಯತಾ ಟೆಕ್‌ಪಾರ್ಕ್ ಗೆ ಆಗಮಿಸಲಿದ್ದಾರೆ.
ಬೆಂಗಳೂರಿಗೆ ಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಹಾಟ್ ಫೋಟೋ ಟ್ವೀಟ್ ಮಾಡಿರುವ ಸನ್ನಿ, ಚಿಲ್ ಬೆಂಗಳೂರ್ ಎಂದು ಬರೆದುಕೊಂಡಿದ್ದಾರೆ.
ಇನ್ನು ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಸನ್ನಿ ಕಾರ್ಯಕ್ರಮದ ಭದ್ರತೆಗೆ ಸುಮಾರು 200 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟೈಮ್ಸ್ ಕ್ರಿಯೆಷನ್ಸ್ ಆಯೋಜಿಸಿರುವ ಈ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಆರಂಭವಾಗಿದ್ದು, ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಗಾಯನ ಪ್ರಸ್ತುತಪಡಿಸಲಿದ್ದಾರೆ. ಸನ್ನಿ ಲಿಯೋನ್ ತಮ್ಮ ಡ್ಯಾನ್ಸ್ ಮೂಲಕ ಜನರನ್ನು ರಂಜಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...