ಬೆಂಗಳೂರು: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿ ಗೌಡ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ವಿಜಿ ಮೊದಲ ಪತ್ನಿ ನಾಗರತ್ನಾ ಅವರಿಗೆ ಸೆಷನ್ಸ್ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕೀರ್ತಿ ಗೌಡ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ನಾಗರತ್ನಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್, ಆರೋಪಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ, ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿದೆ.
ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ನಾಗರತ್ನ ಅವರಿಗೆ ಈಗ ನಿರೀಕ್ಷಣಾ ಜಾಮೀನು ಸಿಕ್ಕಿದ್ದು, ಗಿರಿನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.