ಕೆಪಿಎಸ್ ಸಿ ಕಚೇರಿ 
ರಾಜ್ಯ

ಬೆಂಗಳೂರು: ಕೆಪಿಎಸ್ ಸಿ ಕಚೇರಿಯಲ್ಲಿ ಸಹೋದ್ಯೋಗಿ ಮೇಲೆ ಮಚ್ಚಿನೇಟು!

ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಪಕ್ಕದಲ್ಲಿಯೇ ಇರುವ  ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಇಂದು ಆಘಾತಕಾರಿ ಘಟನೆಯೊಂದು ನಡೆದಿದೆ. ಹಿರಿಯ ಸಹಾಯಕಿ ವಿಜಯಲಕ್ಷ್ಮಿ ಹಾಗೂ ನೌಕರ ರಾಮು ಎಂಬುವರ ಮೇಲೆ ಮತ್ತೋಬ್ಬ ಹಿರಿಯ ಸಹಾಯಕ ನಟರಾಜ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ವಿಧಾನಸೌಧ ಪೊಲೀಸರು ನಟರಾಜನನ್ನು  ಬಂಧಿಸಿದ್ದಾರೆ.

ಇತ್ತೀಚಿಗೆ  ಪತ್ನಿಗೆ ವಿಚ್ಚೇದನ ನೀಡಿದ ನಟರಾಜ್  ಜಯಲಕ್ಷ್ಮಿ ಜೊತೆಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದ. ಇದನ್ನೆ ನೆಪ ಮಾಡಿಕೊಂಡು ಪ್ರೀತಿಯನ್ನು ವ್ಯಕ್ತಪಡಿಸಿ ಮದುವೆಯಾಗುವಂತೆ ಪ್ರಸ್ತಾಪಿಸಿದ್ದಾನೆ. ಜಯಲಕ್ಷ್ಮಿಗೆ ಮದುವೆಯಾಗಿ, ಒಬ್ಬ ಪುತ್ರನಿದ್ದು, ಆತನೊಂದಿಗೆ ಸಂಬಂಧ ಹೊಂದಲು ಆಸಕ್ತಿ ಇಲ್ಲದೆ ಅಂತರ ಕಾಯ್ದುಕೊಂಡಿದ್ದರು .

 ಇದರಿಂದ ಆಕ್ರೋಶಗೊಂಡ ನಟರಾಜ್   ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಜಯಲಕ್ಷ್ಮಿ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದನ್ನು ತಡೆಯಲು ಬಂದ ರಾಮು ಎಂಬ ನೌಕರನ ಮೇಲೂ ಹಲ್ಲೆ ನಡೆಸಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿರುವ ವಿಧಾನಸೌಧ ಪೊಲೀಸರು ಗಾಯಾಗಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಆರೋಪಿ ನಟರಾಜ್ ನನ್ನು ಬಂಧಿಸಿದ್ದಾರೆ.

ಗಾಯಾಳುಗಳು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT