ಅನಿತಾ ಕುಮಾರಸ್ವಾಮಿ 
ರಾಜ್ಯ

ರಾಮನಗರ: ಡಿಕೆಶಿ ದಾಖಲೆ ಮುರಿದ ಅನಿತಾ ಕುಮಾರಸ್ವಾಮಿ ಐತಿಹಾಸಿಕ ಗೆಲುವು

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ....

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಬರೋಬ್ಬರಿ 1,09,137 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಅನಿತಾ ಕುಮಾರಸ್ವಾಮಿ ಅವರು ರಾಮನಗರದಲ್ಲಿ ತಮ್ಮ ಪತಿ ಕುಮಾರಸ್ವಾಮಿ ಹಾಗೂ ಪ್ರಭಾವಿ ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್ ಅವರ ದಾಖಲೆಯನ್ನೂ ಮುರಿದಿದ್ದಾರೆ. 
ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು 22,636 ಹಾಗೂ ಡಿ. ಕೆ. ಶಿವಕುಮಾರ್ 79,909 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅನಿತಾ ಕುಮಾರಸ್ವಾಮಿ ಅವರು ಒಟ್ಟು 1,48,168 ಮತಗಳನ್ನು ಪಡೆದಿದ್ದಾರೆ. ಡಿಕೆಶಿ ಸಹೋದರರ ತಂತ್ರಕ್ಕೆ ಒದ್ದಾಡಿದ್ದ ಬಿಜೆಪಿಯ ನಿವೃತ್ತ ಅಭ್ಯರ್ಥಿ ಎಲ್.ಚಂದ್ರಶೇಖರ್ ಅವರು ಒಟ್ಟು15,906 ಮತಗಳನ್ನು ಮಾತ್ರ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!