ರಾಜ್ಯ

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣ ಅಭಿವೃದ್ಧಿ

Sumana Upadhyaya

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದಲ್ಲಿ ಆರು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ. ಅಹಮದಾಬಾದ್, ಜೈಪುರ, ಲಕ್ನೋ, ಗುವಾಹಟಿ ಮತ್ತು ತಿರುವನಂತಪುರ ವಿಮಾನ ನಿಲ್ದಾಣಗಳು ಸೇರಿವೆ.

ಖಾಸಗಿ ಸಾರ್ವಜನಿಕ ಸಹಭಾಗಿತ್ವ ಅಂದಾಜು ಸಮಿತಿಯ ಮೂಲಕ ವಿಮಾನ ನಿಲ್ದಾಣ ಪ್ರಾಧಿಕಾರ 6 ವಿಮಾನ ನಿಲ್ದಾಣಗಳ ಕಾರ್ಯನಿರ್ವಹಣೆ, ವ್ಯವಸ್ಥಾಪನೆ ಮತ್ತು ಅಭಿವೃದ್ಧಿಗೆ ತಾತ್ವಿಕ ಅನುಮೋದನೆ ನೀಡಿದೆ ಎಂದು ಸಾರ್ವಜನಿಕ ಮಾಹಿತಿ ವಿಭಾಗ ತಿಳಿಸಿದೆ.

ಕಳೆದ ವರ್ಷ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 25 ಲಕ್ಷ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಅದು ಹಿಂದಿನ ವರ್ಷಕ್ಕಿಂತ ಶೇಕಡಾ 30ರಷ್ಟು ಹೆಚ್ಚಾಗಿದೆ. ಪ್ರಸ್ತುತ ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್ ಮತ್ತು ಕೊಚ್ಚಿನ್ ವಿಮಾನ ನಿಲ್ದಾಣಗಳು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆಯಾಗುತ್ತಿದೆ.

SCROLL FOR NEXT