ಆ್ಯಂಬಿಡೆಂಟ್ ಡೀಲ್ ಪ್ರಕರಣ: ರೆಡ್ಡಿಗೆ ಸಿಸಿಬಿ ನೋಟಿಸ್, ಹಾಜರಾಗಲು 48 ಗಂಟೆಗಳ ಗಡುವು
ಆ್ಯಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರಿಗೆ ಬೆಂಗಳೂರಿನ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ನೋಟಿಸ್ ಜಾರಿ ಮಾಡಿದ್ದು, 48 ಗಂಟೆಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ...
ಬೆಂಗಳೂರು: ಆ್ಯಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರಿಗೆ ಬೆಂಗಳೂರಿನ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ನೋಟಿಸ್ ಜಾರಿ ಮಾಡಿದ್ದು, 48 ಗಂಟೆಗಳೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಶನಿವಾರ ತಿಳಿದುಬಂದಿದೆ.
ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರು ಶುಕ್ರವಾರ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗದಿದ್ದರೆ, ರೆಡ್ಡಿಗೆ ಇನ್ನಷ್ಟು ತಲೆನೋವು ಹೆಚ್ಚಾಗುವ ಸಾಧ್ಯತೆಗಳಿವೆ.
ಇನ್ನು ನ್ಯಾಯಾಲಯದಲ್ಲಿ ಕೂಡ ನಿರೀಕ್ಷಣಾ ಜಾಮೀನು ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾಗಿದೆ. ಭಾನುವಾರ ರೆಡ್ಡಿ ವಿಚಾರಣೆಗೆ ಹಾಜರಾಗದಿದ್ದರೆ, ತನಿಖಾಧಿಕಾರಿಗಳು ಅದನ್ನೇ ಮುಂದುಟ್ಟುಕೊಂಡು ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆಗಳಿವೆ. ಇದರಿಂದ ರೆಡ್ಡಿಯ ನಿರೀಕ್ಷಣಾ ಜಾಮೀನು ರದ್ದಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಇನ್ನು ವಿಚಾರಣೆಗೆ ಹಾಜರಾದರೆ, ಅವರನ್ನು ಬಂಧಿಸುವುದು ಅಥವಾ ವಿಚಾರಣೆ ನಡೆಸಿ ಕಳುಹಿಸುವುದು ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು. ಆದರೆ, ಪ್ರಸ್ತುತದ ಪರಿಸ್ಥಿತಿಯಲ್ಲಿ ಸಿಸಿಬಿ ಅಧಿಕಾರಿಗಳು ಜನಾರ್ಧನ ರೆಡ್ಡಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.