ಕುಸಿದುಬಿದ್ದ ಕಟ್ಟಡ 
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವು

ಮೂರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟ...

ಬೆಂಗಳೂರು: ಮೂರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಶನಿವಾರ ಸಂಜೆ ನಡೆದಿದೆ. 
ತ್ಯಾಗರಾಜನಗರದ ಸಾಯಿಬಾಬಾ ದೇಗುಲದ ಬಳಿ 2ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದ್ದು, ಮೃತ ಕಾರ್ಮಿಕನನ್ನು ಸುಹೇಲ್ ಎಂದು ಗುರುತಿಸಲಾಗಿದೆ.
ಕಟ್ಟಡದಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಇನ್ನು ಮೂವರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಪಕ್ಕದ ಕಟ್ಟಡದಲ್ಲಿ ವಾಸವಿರುವ ಜನರನ್ನು ಸ್ಥಳಾಂತರಿಸಲಾಗಿದೆ. 
ಕಳಪೆ ಕಾಮಗಾರಿಯಿಂದಾಗಿ ಕಟ್ಟಡ ಹಠಾತ್ತನೆ ಕುಸಿದು ಬಿದ್ದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ತ್ಯಾಗರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡದ ಮಾಲೀಕ ಹಾಗೂ ಗುತ್ತಿಗೆದಾರನ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್