ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಹಲವು ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಹಕ್ಕೊತ್ತಾಯ ಮಾಡುತ್ತಿರುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮ್ಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ನಡೆದ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಮುಸ್ಲಿಂರು ಮಾತ್ರವಲ್ಲ, ದೇಶದಾದ್ಯಂತ ಮುಸ್ಲಿಂರು ರಾಮಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದರು.
ರಾಮ ಮಂದಿರ ನಿರ್ಮಾಣ ಮಾಡಿ ಆದೇ ರೀತಿಯಲ್ಲಿ ಧ್ವಂಸಗೊಂಡಿರುವ ಮಸೀದಿಯನ್ನು ಪುನರು ನಿರ್ಮಾಣ ಮಾಡಬೇಕೆಂದು ತಮ್ಮ ಬೇಡಿಕೆಯಾಗಿದೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.