ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ವೈದ್ಯರ ಸಲಹೆಯಿಂದಾಗಿ ಟಿಪ್ಪು ಜಯಂತಿಗೆ ಗೈರಾದೆ: ಸಿಎಂ ಕುಮಾರಸ್ವಾಮಿ

ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವ ಕಾರಣ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಸ್ಪಷ್ಟಪಡಿಸಿದ್ದಾರೆ...

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವ ಕಾರಣ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಸ್ಪಷ್ಟಪಡಿಸಿದ್ದಾರೆ. 
ವಿವಾದ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿಯವರು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಹೀಗಾಗಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಬೇಕಾಗಿ ಬಂತು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಟಿಪ್ಪು ಜಯಂತಿಗೆ ಗೈರಾಗಿರುವುದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳನ್ನು ನೀಡಲಾಗುತ್ತಿದೆ. ಅದಲೆಲ್ಲಾ ಸತ್ಯಕ್ಕೆ ದೂರವಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ. ಹೀಗಾಗಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಮೂಢನಂಬಿಕೆ ವಿರೋಧಿಯಾದ ನಾನು ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT