ರಾಜ್ಯ

ನಾಳೆ ಮಧ್ಯಾಹ್ನ 1 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅಂತ್ಯ ಸಂಸ್ಕಾರ

Shilpa D
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶ- ವಿದೇಶಗಳ ಗಣ್ಯರು ಅಂತಿಮ‌ ದರ್ಶನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ ಹೇಳಿದ್ದಾರೆ.
ಅನಂತ್ ಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಹಾಗೂ ಯಡಿಯೂರಪ್ಪ ಅವರ ಜೊತೆ ಮಾತನಾಡಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.ಪಾರ್ಥೀವ ಶರೀರವನ್ನು ಇಂದು ಇಡೀ ದಿನ ಅವರ ಮನೆಯಲ್ಲಿ ಇಡಲಾಗುವುದು, ನಾಳೆ ಬೆಳಗೆಗೆ 8 ಗಂಟೆಗೆ  ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ಕೊಂಡೊಯ್ದು 9ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನದಲ್ಲಿ ಇಡಲಾಗುವುದು ಎಂದು ಹೇಳಿದ್ದಾರೆ. 
ನ್ಯಾಷನಲ್ ಕಾಲೇಜು ಮೈದಾನದ ಬಗ್ಗೆ ಅನಂತ್ ಕುಮಾರ್ ಅವರಿಗೆ ಬಹಳ ಅಭಿಮಾನವಿತ್ತು, ಅವರ ಎಲ್ಲಾ ಕಾರ್ಯಕ್ರಮಗಳನ್ನು ಅದೇ ಮೈದಾನದಿಂದ ಆರಂಭ ಮಾಡುತ್ತಿದ್ದರು, ಹೀಗಾಗಿಯೇ ಅಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಹಿಂದೂ ರುದ್ರ ಭೂಮಿಯಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಸಲಾಗುವುದು. 
SCROLL FOR NEXT