ಜೆಡಿಎಸ್ ಮುಖಂಡ ಆರ್.ಟಿ ರಾಜಗೋಪಾಲ್ 
ರಾಜ್ಯ

ರಾಮನಗರ: ನಾಲ್ವರು ದುಷ್ಕರ್ಮಿಗಳಿಂದ ಜೆಡಿಎಸ್ ಮುಖಂಡನ ಬರ್ಬರ ಕೊಲೆ

ನಾಲ್ವರು ದುಷ್ಕರ್ಮಿಗಳ ತಂಡ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿಯನ್ನು ಬರ್ಬರವಾಗಿ...

ರಾಮನಗರ: ನಾಲ್ವರು ದುಷ್ಕರ್ಮಿಗಳ ತಂಡ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದ ಜೆಡಿಎಸ್ ಮುಖಂಡ ಆರ್.ಟಿ ರಾಜಗೋಪಾಲ್ ಎಂದು ಗುರುತಿಸಲಾಗಿದ್ದು,  ಕನಕಪುರದ ರಾಮನಗರ ರಸ್ತೆಯಲ್ಲಿನ ಜನನಿ ಆಸ್ಪತ್ರೆ ಬಳಿ ಬಳಿ ಟೀ ಕುಡಿಯುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದಾರೆ.
ಮೂಲತ ರಾಮನಗರ ಜಿಲ್ಲೆಯ ಪಿ.ರಾಂಪುರ ಗ್ರಾಮದ ನಿವಾಸಿಯಾಗಿದ್ದ ರಾಜಗೋಪಾಲ್ ಕನಕಪುರದಲ್ಲಿ ವಾಸ ಮಾಡುತ್ತಿದ್ದರು.
ಇಂದು ಸಂಜೆ ರಾಜಗೋಪಾಲ್ ಮತ್ತು ಕೆಲವರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ರಾಜ್‍ಗೋಪಾಲ್ ಟೀ ಕುಡಿಯಲು ಆಗಮಿಸಿದ್ದರು. ಈ ವೇಳೆ ರಾಜಗೋಪಾಲ್ ಪಾಲರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ಗುರುತು ಪತ್ತೆಯಾಗಿಲ್ಲ. ಘಟನೆ ಬಳಿಕ ಮಿಂಚಿನ ವೇಗದಲ್ಲಿ ಎಲ್ಲ ನಾಲ್ವರು ಪರಾರಿಯಾಗಿದ್ದಾರೆ.
ಕನಕಪುರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT