ಕೇಂದ್ರ ಸಚಿವ ಅನಂತ್ ಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ

ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ...

ಬೆಂಗಳೂರು: ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್ ಚಿಕಿತ್ಸೆಗೆ ಕಳೆದ ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ. ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಖಾಸಗಿ ಆಸ್ಪತ್ರೆಯಿಂದ ಇದೀಗ ಅವರ ನಿವಾಸ ಬಸವನಗುಡಿಯಲ್ಲಿರುವ ಸುಮೇರ ನಿವಾಸದಲ್ಲಿರಿಸಲಾಗಿದೆ. ಅವರ ಬಂಧು-ಮಿತ್ರರು ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗೆ 9 ಗಂಟೆ ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ದಕ್ಷಿಣ ವಿಭಾಗ ಪೊಲೀಸರಿಂದ ‌ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT