ರಾಜ್ಯ

ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿ ಮಾತೃಭಾಷೆಯಲ್ಲಿ ಮಾತನಾಡಿ ಕನ್ನಡ ಪ್ರೇಮ ಮೆರೆದಿದ್ದ ಅನಂತಕುಮಾರ್

Shilpa D
ಬೆಂಗಳೂರು: ನಾಡು ನುಡಿ ವಿಚಾರದಲ್ಲಿ ಅನಂತಕುಮಾರ್ ಅವರಿಗೆ ಅಪಾರವಾದ ಪ್ರೀತಿಯಿತ್ತು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆ ಅನಂತ್ ಕುಮಾರ್ ಅವರಿಗೆ ಸೇರಿದ್ದು. 
2015 ರಲ್ಲಿ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಅವರು ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಇತಿಹಾಸ ನಿರ್ಮಿಸಿದ್ದರು.
2015ರ ಅಕ್ಟೋಬರ್​ 15ರಂದು ವಿಶ್ವಸಂಸ್ಥೆಯ 67ನೇ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡ ವೇಳೆ ಅನಂತಕುಮಾರ್ ಅವರು ಕನ್ನಡದಲ್ಲಿ ಭಾಷಣ  ಮಾಡಿ ಎಲ್ಲರ ಗಮನಸೆಳೆದಿದ್ದರು. ವಿಶ್ವಸಂಸ್ಥೆಯಲ್ಲಿ ಅನಂತ ಕುಮಾರ್​​ಅವರು ಕನ್ನಡದಲ್ಲಿ ಸ್ವಾಗತ ಕೋರಿದ್ದರು.
ಸನ್ಮಾನ್ಯ ಅಧ್ಯಕ್ಷರೇ ಮತ್ತು ವಿಶ್ವದ ನನ್ನ ಪ್ರೀತಿಯ ಸಹೋದರ, ಸಹೋದರಿಯರೇ ನಿಮ್ಮೆಲ್ಲರಿಗೂ ನನ್ನ ಮುಂಜಾನೆಯ ಶುಭಾಶಯಗಳು ಎಂದು ಅನಂತಕುಮಾರ್​ಭಾಷಣ ಆರಂಭಿಸಿದ್ದರು.
SCROLL FOR NEXT