ಸಂತೋಷ್ ತಮ್ಮಯ್ಯ 
ರಾಜ್ಯ

ಧರ್ಮ ನಿಂದನೆ ಆರೋಪ: ಪತ್ರಕರ್ತ, ಅಂಕಣಕಾರ ಸಂತೋಷ್ ತಮ್ಮಯ್ಯ ಬಂಧನ

ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪತ್ರಕರ್ತ, ಪ್ರಸಿದ್ದ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೋಲೀಸರು ಬಂಧಿಸಿದ್ದಾರೆ.

ಗೋಣಿಕೊಪ್ಪ(ಮಡಿಕೇರಿ): ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಧರ್ಮ ನಿಂದನೆ ಮಾಡಿದ್ದಾರೆಂದು ಆರೋಪಿಸಿ ಪತ್ರಕರ್ತ, ಪ್ರಸಿದ್ದ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೋಲೀಸರು ಬಂಧಿಸಿದ್ದಾರೆ.
ಸಂತೋಷ್ ತಮ್ಮಯ್ಯ ವಿಚಾರಣೆ ನಡೆಸಿದ ಪೋಲೀಸರು ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನವೆಂಬರ್ 5ರಂದು ಗೋಣೆಕೊಪ್ಪದ ಪ್ರಜ್ಞಾ ಕಾವೇರಿ ಸಂಘಟನೆ ಆಯೋಜಿಸಿದ್ದ "ಟಿಪ್ಪು ಕರಾಳ ಮುಖಗಳ ಅನಾವರಣ" ವಿಚಾರ ಸಂಕೀರ್ಣದಲ್ಲಿ ಮಾತನಾಡಿದ ತಮ್ಮಯ್ಯ ಧರ್ಮವೊಂದರ ಕುರಿತು ಅವಹೇಳನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 
ತಮ್ಮಯ್ಯ ಸಮಾಜದ ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ಸಿದ್ದಾಪುರ ಕರಡಿಗೋಡು ಗ್ರಾಮ ನಿವಾಸಿ ಕೆ.ಜಿ. ಅನ್ವರ್ ದೂರು ನೀಡಿದ್ದರು. ದೂರಿನ ಹಿನ್ನೆಲೆ ಮಂಗಳವಾರ ಮುಂಜಾನೆ ಸಂತೋಷ್ ತಮ್ಮಯ್ಯ ಬಂಧನವಾಗಿದೆ.
ಬಂಧನ ಖಂಡಿಸಿ ಪ್ರತಿಭಟನೆ
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಗೋಣಿಕೊಪ್ಪದಲ್ಲಿ ಹಿಂದೂಪರ ಕಾರ್ಯಕರ್ತರು ಸೇರಿ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್