ಸಂಗ್ರಹ ಚಿತ್ರ 
ರಾಜ್ಯ

ಬಸವೇಶ್ವರನಗರ ಅತ್ಯಾಚಾರ ಪ್ರಕರಣ: ಕಾಮುಕನಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ

ಬಸವೇಶ್ವರನಗರ ಒಂಟಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿರುವ ಅಧಿಕಾರಿಗಳು ಕಾಮುಕನಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ...

ಬೆಂಗಳೂರು: ಬಸವೇಶ್ವರನಗರ ಒಂಟಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿರುವ ಅಧಿಕಾರಿಗಳು ಕಾಮುಕನಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 
ಬಸವೇಶ್ವರನಗರದಲ್ಲಿ ಗುರುವಾರ ತಡರಾತ್ರಿ ಮನೆಗೆ ನುಗ್ಗಿರುವ ಕಾಮುಕನೊಬ್ಬ 33 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. 
ಒಂಟಿ ಮಹಿಳೆಯೆಂದು ಅರಿತ ಆರೋಪಿ ಆಕೆಯನ್ನು ಹಿಂಬಾಲಿಸಿ ಮನೆಯ ಬೆಲ್ ಮಾಡಿದ್ದಾನೆ. ಬಾಗಿಲು ತೆಗೆದ ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ, ಮನೆಯೊಳಗೆ ನುಗ್ಗಿ ಬಾಗಿಲು ಮುಚ್ಚಿದ್ದಾನೆ. ಕೂಗಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮಹಿಳೆ ಜೊತೆಗೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ. 
ಅತ್ಯಾಚಾರ ಮಾಡಿ ಮನೆಯಲ್ಲಿಯೇ ಕೆಲ ಕಾಲ ಉಳಿದ ದುಷ್ಕರ್ಮಿ, ಮೇಲಿಂದ ಮೇಲೆ ಮಹಿಳೆ ಮೇಲೆ ಅತ್ಯಾಚಾರವೆಸಗಿ, ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಆಯುಕ್ತ ಬಿ.ಕೆ.ಸಿಂಗ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುರಿತು ಕೆಲ ಸುಳಿವುಗಳು ದೊರಕಿವೆ ಎಂದು ಹೇಳಿದ್ದಾರೆ. ಆದರೆ, ಮತ್ತಷ್ಟು ಮಾಹಿತಿ ನೀಡಲು ನಿರಾಕರಿಸಿದ್ದಾರೆ. 
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ಮಾತನಾಡಿ, ಆರೋಪಿ ಕುರಿತು ಮಾಹಿತಿ ಸಂಗ್ರಹಿಸಲು ಸ್ಥಳೀಯರ ಸಹಾಯ ಕೇಳಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳಿಂದ ಯಾವುದೇ ಸುಳಿವುಗಳು ದೊರಕಿಲ್ಲ ಎಂದು ಹೇಳಿದ್ದಾರೆ. 
ಘಟನೆ ಬಳಿಕ ತನಿಖೆ ನಡೆಸುತ್ತಿರುವ ಪೊಲೀಸರೇ ಸ್ಥಳೀಯ ಮನೆ ಬಾಗಿಲು ಬಡಿದರೂ ಬಾಗಿಲು ತೆಗೆಯಲು ಸ್ಥಳೀಯರು ಹೆದರುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT