ರಾಜ್ಯ

ಬೆಳಗಾವಿ: ಕಬ್ಬು ಬೆಳೆಗಾರರಿಂದ ನಾಳೆ ಪ್ರತಿಭಟನೆ

Sumana Upadhyaya

ಬೆಳಗಾವಿ: ಅಧಿಕ ಬೆಲೆ ನಿಗದಿಪಡಿಸದೆ ಸಕ್ಕರೆ ಕಾರ್ಖಾನೆಗಳು ಕಬ್ಬನ್ನು ಅರೆಯಲು ಆರಂಭಿಸಿರುವುದನ್ನು ವಿರೋಧಿಸಿ ನಾಳೆ ಕಬ್ಬು ಬೆಳೆಗಾರರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ನಾಳೆ ಧರಣಿ ನಡೆಸಲು ಮುಂದಾಗಿದ್ದಾರೆ.

ಕಳೆದ ಎರಡು ವಾರಗಳಿಂದ ಅಥಣಿ ತಾಲ್ಲೂಕಿನ ಎಲ್ಲಾ ಸಕ್ಕರೆ ಕಾರ್ಖಾನೆಗಳನ್ನು ಮುಚ್ಚಿರುವ ಕಬ್ಬು ಬೆಳೆಗಾರರು ಕಳೆದ ಸಾಲಿನಲ್ಲಿ ಕಾರ್ಖಾನೆಗಳಿಗೆ ಪೂರೈಸಿದ ಕಬ್ಬುಗಳಿಗೆ ಪ್ರತಿ ಕ್ವಿಂಟಾಲ್ ಗೆ 2,900 ರೂಪಾಯಿ ನಿಗದಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಕಬ್ಬು ಬೆಳೆಗಾರರ ಮುಖ್ಯ ನಾಯಕರನ್ನು ಇಂದು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಭೇಟಿ ಮಾಡಿದ್ದಾರೆ. ಅಥಣಿ ತಾಲ್ಲೂಕಿನ ಕಬ್ಬು ಬೆಳೆಗಾರರು ಪ್ರತಿ ಕ್ವಿಂಟಾಲ್ ಗೆ 2ರಿಂದ 2,300 ರೂಪಾಯಿಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

SCROLL FOR NEXT