ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭ 
ರಾಜ್ಯ

ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭ

ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಪಾದಚಾರಿಗಳಿಗೆ ಭಾರೀ ನಿರಾಳ ಎದುರಾಗಿದೆ...

ಬೆಂಗಳೂರು: ಬೆಂಗಳೂರು-ಮೈಸೂರು ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು, ಪಾದಚಾರಿಗಳಿಗೆ ಭಾರೀ ನಿರಾಳ ಎದುರಾಗಿದೆ. 
ರಸ್ತೆ ಅಗಲೀಕರಣ ಕುರಿತು ರಾಜ್ಯ ಸರ್ಕಾರ ನಡೆಸಿದ್ದ ಸಮೀಕ್ಷೆ ಪೂರ್ಣಗೊಂಡಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಮರಗಳ ಕಡಿಯುವುದು ಹಾಗೂ ಸ್ಥಳದ ಗಡಿ ನಿಗದಿ ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಿದೆ. ಇದಲ್ಲದೆ, ಸ್ವಚ್ಛತಾ ಕಾರ್ಯಗಳನ್ನೂ ಕೂಡ ಪೂರ್ಣಗೊಳಿಸಲಾಗಿದೆ. 
ಅಷ್ಟಪಥ ರಸ್ತೆ ನಿರ್ಮಾಣ ಕಾರ್ಯಕ್ಕೆ ಅಂದಾಜು ರೂ.6 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ನಿರೀಕ್ಷಿಸಲಾಗಿದ್ದು, ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕ ಬೆಂಗಳೂರ-ಮೈಸೂರು ನಡುವಿನ ಸಂಚಾರಕ್ಕೆ 120 ನಿಮಿಷಗಳು ಸಮಯ ಹಿಡಿಯಲಿದೆ. 
ರಸ್ತೆ ಅಗಲೀಕರಣಕ್ಕೆ ಈಗಾಗಲೇ ಹಲವು ಸಿದ್ಧತೆಗಳನ್ನು ನಡೆಸಿರುವ ಸರ್ಕಾರ, ನಿರ್ಮಾಣ ಕಾರ್ಯಗಳು ಸಂಪೂರ್ಣವಾಗಿ ಡಿಸೆಂಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ. ಈಗಾಗಲೇ ರಸ್ತೆಗಳಲ್ಲಿದ್ದ ಡಾಬಾ, ಅಂಗಡಿಗಳು ಹಾಗೂ ಇತರೆ ವಾಣಿಜ್ಯ ಕಟ್ಟಡಗಳನ್ನು ಸ್ಥಳಂತರ ಮಾಡುವಂತೆ ಮಾಲೀಕರಿಗೆ ಸೂಚಿಸಿದೆ. ಯೋಜನೆಗೆ ಅಗತ್ಯವಿರುವ ಶೇ.80ರಷ್ಟು ಭೂಮಿಯನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ನಿರ್ಮಾಣ ಕಾರ್ಯ ಬೆಂಗಳೂರು-ನೀಡಘಟ್ಟ ಮತ್ತು ಮೈಸೂರು-ನೀಡಘಟ್ಟ ಎರಡು ಹಂತಗಳಲ್ಲಿ ನಡೆಯಲಿದೆ. 
ಹಿಂದಿನ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಹೆಚ್.ಸಿ.ಮಹದೇವಪ್ಪ ಅವರ ಮನವಿ ಬಳಿಕ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್  ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯೆಂದು ಘೋಷಣೆ ಮಾಡಿದ್ದರು. ಅಲ್ಲದೆ, ಹೆದ್ದಾರಿ ಅಭಿವೃದ್ಧಿಗಾಗಿ ರೂ.2,300ಕೋಟಿ ಬಿಡುಗಡೆ ಮಾಡಿದ್ದರು. ಇದಾದ ಬಳಿಕ ಕೇಂದ್ರ ಎನ್'ಡಿಎ ಸರ್ಕಾರ ರೂ. 6000 ಕೋಟಿ ವೆಚ್ಚದಲ್ಲಿ ಅಷ್ಟಪಥ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿತ್ತು.
ಭೋಪಾಲ್ ಮೂಲಕ ಕಂಪನಿ ನಿರ್ಮಾಣ ಕಾರ್ಯದ ಗುತ್ತಿಗೆಯನ್ನು ಪಡೆದುಕೊಂಡಿದೆ. 2018ರ ಡಿಸೆಂಬರ್ ತಿಂಗಳಿನಲ್ಲಿ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದಲ್ಲಿ ಬೈಪಾಸ್ ಮಾಡುವ ಕುರಿತು ಪ್ರಸ್ತಾಪವಿಟ್ಟಿದ್ದಾರೆ. ಇದು ಯೋಜನೆಯ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT