ಸಾಂದರ್ಭಿಕ ಚಿತ್ರ 
ರಾಜ್ಯ

ಹತ್ತರಲ್ಲಿ ಆರು ಮಂದಿ ಪೋಷಕರು ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವುದಿಲ್ಲ: ಅಧ್ಯಯನ

ಹತ್ತು ಮಂದಿ ಪೋಷಕರಲ್ಲಿ 6 ಮಂದಿ ತಮ್ಮ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವುದಿಲ್ಲ ಎಂದು...

ಬೆಂಗಳೂರು: ಹತ್ತು ಮಂದಿ ಪೋಷಕರಲ್ಲಿ 6 ಮಂದಿ ತಮ್ಮ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವುದಿಲ್ಲ ಎಂದು ಅಧ್ಯಯನವೊಂದು ಹೇಳುತ್ತದೆ. ಬೆಂಗಳೂರು ಸೇರಿದಂತೆ ದೇಶದ 8 ನಗರಗಳಲ್ಲಿ 2,268 ಮಕ್ಕಳ ಮೇಲೆ ನಡೆಸಲಾದ ಅಧ್ಯಯನದಿಂದ ಈ ಅಂಶ ಬಹಿರಂಗವಾಗಿದೆ.

ಇಂದಿನ ಇಂಟರ್ನೆಟ್ ಯುಗದಲ್ಲಿ ಇಬ್ಬರಲ್ಲಿ ಒಬ್ಬ ಮಕ್ಕಳು ಪ್ರತಿದಿನ ಎರಡರಿಂದ ಮೂರು ಗಂಟೆಯವರೆಗೆ ಇಂಟರ್ನೆಟ್ ನಲ್ಲಿ ಕಳೆಯುತ್ತಾರೆ. ಬಹುತೇಕ ಪೋಷಕರು ತಮ್ಮ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವುದಿಲ್ಲ ಎಂಬುದನ್ನು ನೋಡಿದರೆ ಆಶ್ಚರ್ಯವಾಗುತ್ತದೆ.

ಭಾರತದಲ್ಲಿ ನಮಗೆ ಸಿಕ್ಕಿರುವ ಅಂಕಿಅಂಶ ಪ್ರಕಾರ, 5ರಿಂದ 12 ವಯಸ್ಸಿನೊಳಗಿನ ಶೇಕಡಾ 53ರಷ್ಟು ಮಕ್ಕಳು ಒಂದಲ್ಲ ಒಂದು ರೀತಿಯ ಲೈಂಗಿಕ ಹಲ್ಲೆ, ನಿಂದನೆಗಳಿಗೆ ಗುರಿಯಾಗುತ್ತಾರೆ ಎಂದು ಮಾರುಕಟ್ಟೆ ಸಂಶೋಧನಾ ಸಂಸ್ಥೆ ವೆಲಾಸಿಟಿ ಎಂಆರ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಸಲ್ ಶಾ ತಿಳಿಸಿದ್ದಾರೆ.

ಡಿಜಿಟಲ್ ಮಾಧ್ಯಮ ಇಂದು ಶರವೇಗದಲ್ಲಿ ಬೆಳವಣಿಗೆಯಾಗುತ್ತಿದೆ. ಯುವ ಜನತೆ ಇದನ್ನು ಅವ್ಯಾಹತವಾಗಿ ಬಳಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮ ಮಕ್ಕಳಿಗೆ ಸುರಕ್ಷಿತವಾಗಿಲ್ಲದಿದ್ದರೂ ಕೂಡ ಆನ್ ಲೈನ್, ಇಂಟರ್ನೆಟ್, ಸೋಷಿಯಲ್ ಮೀಡಿಯಾ ಬಳಕೆಯ ಒತ್ತಡ ಮತ್ತು ಪ್ರಭಾವ ಮಕ್ಕಳ ಮೇಲೆ ಆಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT