ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಬರಪೀಡಿತ ಜಿಲ್ಲೆಗಳಲ್ಲಿ ಕೇಂದ್ರ ಅಧ್ಯಯನ ತಂಡ ಪ್ರವಾಸ - ಎಚ್. ಡಿ. ಕುಮಾರಸ್ವಾಮಿ

ಬರಪೀಡಿತ ಜಿಲ್ಲೆಗಳಲ್ಲಿ ಶನಿವಾರದಿಂದ ಸೋಮವಾರದವರೆಗೂ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದ್ದು, ಬರ ಪರಿಸ್ಥಿತಿ ಹಾಗೂ ಬೆಳೆನಷ್ಟದ ಬಗ್ಗೆ ಪರಾಮರ್ಶೆ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು: ಬರಪೀಡಿತ ಜಿಲ್ಲೆಗಳಲ್ಲಿ ಶನಿವಾರದಿಂದ ಸೋಮವಾರದವರೆಗೂ  ಕೇಂದ್ರ ಅಧ್ಯಯನ ತಂಡ ಭೇಟಿ ನೀಡಲಿದ್ದು, ಬರ ಪರಿಸ್ಥಿತಿ ಹಾಗೂ ಬೆಳೆನಷ್ಟದ ಬಗ್ಗೆ ಪರಾಮರ್ಶೆ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

 ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದಲ್ಲಿನ ತಂಡ  ರಾಯಚೂರು, ಯಾದಗಿರಿ, ಕೋಲಾರ, ಮತ್ತಿತರ ಜಿಲ್ಲೆಗಳ ಆಯ್ದ ಗ್ರಾಮಗಳಿಗೆ  ಪ್ರವಾಸ ಕೈಗೊಳ್ಳಲಿದ್ದು, ಪರಿಸ್ಥಿತಿ ಅವಲೋಕನ ನಡೆಸಲಿದೆ ಎಂದು ಹೇಳಿದರು.

ಪ್ರವಾಸದ ಬಳಿಕ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ  ಅಧ್ಯಯನ ತಂಡ ಚರ್ಚೆ ನಡೆಸಲಿದೆ. ಈ ತಂಡ ನೀಡುವ ವರದಿ ಆಧಾರದ ಮೇಲೆ ಕೇಂದ್ರಸರ್ಕಾರ ಬರ ಪರಿಸ್ಥಿತಿ ನಿರ್ವಹಣೆಗಾಗಿ ಹಣ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.

ಬರ ನಿರ್ವಹಣೆಗಾಗಿ ಕೇಂದ್ರಸರ್ಕಾರದಿಂದ ಪರಿಹಾರ ಕೋರಿ ಒಂದು ತಿಂಗಳ ಹಿಂದೆ ರಾಜ್ಯಸರ್ಕಾರ ಸಲ್ಲಿಸಿದ ಮನವಿ ಕುರಿತಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೇಂದ್ರದಿಂದ ಯಾವುದೇ ಹಣ ಬಿಡುಗಡೆ ಆಗಿಲ್ಲ ಎಂದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿಗೂ 50 ಲಕ್ಷ ರೂ. ಹಣವನ್ನು ರಾಜ್ಯಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT