ಕುಮಾರ ಸ್ವಾಮಿ 
ರಾಜ್ಯ

ಟಿಪ್ಪು ಜಯಂತಿ ಆಚರಣೆ ವಿಚಾರ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ; ಸಿಎಂ

ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.

ಬೆಂಗಳೂರು:  ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಿಎಂ ಕುಮಾರಸ್ವಾಮಿ, ಟಿಪ್ಪು ಜಯಂತಿ ವಿಷಯವನ್ನು ರಾಜಕೀಯಕರಣಗೊಳಿಸಲು ಯತ್ನಿಸುತ್ತಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ನವೆಂಬರ್ 10 ರಂದು ನಡೆದ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಗೈರಾಗಿದ್ದರು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದಕ್ಕೆ ವಿವರಣೆ ನೀಡಿದ ಅವರು, ಎಲ್ಲಾ ಕಾರ್ಯಕ್ರಮಗಳಿಗೂ ಹಾಜರಾಗಬೇಕೆಂಬ ಅವಶ್ಯಕತೆಯಿಲ್ಲ, ಸರ್ಕಾರದ ಪ್ರತಿನಿಧಿಗಳ ಸಮ್ಮುಖದಲ್ಲಿ ಅಧಿಕೃತ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಹೇಳಿದ್ದಾರೆ.
ಮಡಿಕೇರಿಯಲ್ಲಿ  ಟಿಪ್ಪು ಜಯಂತಿ ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸ್ಥಳೀಯ ಕನ್ನಡ ಪತ್ರಿಕೆ ಸಂಪಾದಕರ ಮೇಲೆ ಕೇಸ್ ದಾಖಲಿಸಲಾಗಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನನಗೆ ಪ್ರಕರಣದ ಬಗ್ಗೆ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT