ಸ್ವಾಮಿ ಜಗದಾತ್ಮಾನಂದಜೀ 
ರಾಜ್ಯ

ಮೈಸೂರು: 'ಬದುಕಲು ಕಲಿಯಿರಿ' ಖ್ಯಾತಿಯ ಸ್ವಾಮಿ ಜಗದಾತ್ಮಾನಂದಜೀ ವಿಧಿವಶ

ಬದುಕಲು ಕಲಿಯಿರಿ' ಪುಸ್ತಕದ ಲೇಖಕ ಹಾಗೂ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಜಗದಾತ್ಮನಂದಜೀ(89) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.

ಮೈಸೂರು: 'ಬದುಕಲು ಕಲಿಯಿರಿ' ಪುಸ್ತಕದ ಲೇಖಕ ಹಾಗೂ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಜಗದಾತ್ಮನಂದಜೀ(89) ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಗದಾತ್ಮಾನಂದಜೀ ಅವರು ಕಳೆದ ಒಂದು ತಿಂಗಳಿಂದ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ. 
ನಾಳೆ ಬೆಳಗ್ಗೆ 10ರಿಂದ 1 ಗಂಟೆಯವರೆಗೆ ರಾಮಕೃಷ್ಣ ಆಶ್ರಮದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳಿಕ ಮಧ್ಯಾಹ್ನ 1ಗಂಟೆಗೆ ಪೊನ್ನಂಪೇಟೆಯ ಆಶ್ರಮಕ್ಕೆ ಪಾರ್ಥಿವ ಶರೀರ ತರಲಾಗುವುದು ಎಂದು ಆಶ್ರಮದ ಮೂಲಗಳು ತಿಳಿಸಿವೆ.
ಜಗದಾತ್ಮಾನಂದಜೀ ಅವರು 9 ಭಾಷೆಗಳಿಗೆ ಭಾಷಾಂತರವಾಗಿರುವ 'ಬದುಕಲು ಕಲಿಯಿರಿ' ಕೃತಿ ರಚಿಸಿ ಖ್ಯಾತರಾಗಿದ್ದರು. ಈ ಕೃತಿಯ ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!