ಡಿ.ಕೆ ಶಿವಕುಮಾರ್ 
ರಾಜ್ಯ

'ಆಯುಷ್ಮಾನ್‌ ಭಾರತ್‌, ಆರೋಗ್ಯ ಕರ್ನಾಟಕ' ಯೋಜನೆಗೆ ಸರ್ಕಾರ ಚಾಲನೆ

ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ' ಯೋಜನೆಗೆ ರಾಜ್ಯ ...

ಬೆಂಗಳೂರು: ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷೆಯ 'ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ'  ಯೋಜನೆಗೆ ರಾಜ್ಯ ಸರಕಾರ ಚಾಲನೆ ನೀಡಿದೆ. 
ರಾಜ್ಯ ಸರಕಾರದ ಆರೋಗ್ಯ ಕರ್ನಾಟಕ ಮತ್ತು ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ್‌ನ್ನು ಸಂಯೋಜಿತಗೊಳಿಸಿ ರೂಪಿಸಿದ ಹೊಸ ಯೋಜನೆಯಡಿ ರಾಜ್ಯದ ಎಲ್ಲ ಕುಟುಂಬಗಳಿಗೆ ಆರೋಗ್ಯ ಸೌಲಭ್ಯಗಳು ದೊರೆಯಲಿದೆ. ಸಂಯೋಜಿತ ಎಬಿ-ಎಆರ್‌ಕೆ ಯೋಜನೆಗೆ ಅಕ್ಟೋಬರ್‌ 30ರಂದು ಒಡಂಬಡಿಕೆ ನಡೆದಿದ್ದು, ಈಗಾಗಲೇ ಹಲವಾರು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಈ ವಿವರಗಳನ್ನು ವೈದ್ಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಡಿದರು. 
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ರಾಜ್ಯದ 62 ಲಕ್ಷ ಬಿಪಿಎಲ್‌ ಕಾರ್ಡ್‌ದಾರರಿಗೆ ಚಿಕಿತ್ಸೆ ದೊರೆಯಲಿದೆ. ಇದರಲ್ಲಿ ಶೇ. 60ರಷ್ಟು ಹಣವನ್ನು ಕೇಂದ್ರ ಸರಕಾರ ನೀಡಲಿದ್ದರೆ, ಉಳಿದ ಶೇ. 40ರಷ್ಟನ್ನು ರಾಜ್ಯ ಸರಕಾರ ಭರಿಸಲಿದೆ. ರಾಜ್ಯದಲ್ಲಿ ಒಟ್ಟು 115 ಲಕ್ಷ ಬಿಪಿಎಲ್‌ ಕಾರ್ಡ್‌ದಾರರಿಗೆ ಆರೋಗ್ಯ ಯೋಜನೆ ಅನ್ವಯವಾಗಲಿದ್ದು, ಉಳಿದ 53 ಲಕ್ಷ ಬಿಪಿಎಲ್‌ ಕಾರ್ಡ್‌ದಾರರ ಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಇದರಡಿ ಬಿಪಿಎಲ್‌ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ. ಹಾಗೂ ಎಪಿಎಲ್‌ ಕುಟುಂಬಗಳಿಗೆ ವಾರ್ಷಿಕ 1.50 ಲಕ್ಷ ರೂ. ವರೆಗಿನ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ. 
ಜತೆಗೆ 19 ಲಕ್ಷ ಎಪಿಎಲ್‌ ಕುಟುಂಬದವರ ಚಿಕಿತ್ಸೆಗೆ ನಿಗದಿಯಾದ ಪೂರ್ಣ ಮೊತ್ತವನ್ನು ರಾಜ್ಯ ಸರಕಾರವೇ ನೀಡಲಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT