ಸಾಂದರ್ಭಿಕ ಚಿತ್ರ 
ರಾಜ್ಯ

ಅಣ್ಣಿಗೇರಿಯಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ 6 ಮಂದಿ ದುರ್ಮರಣ

ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ...

ಧಾರವಾಡ: ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಕೋಳಿವಾಡ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. 
ಮೃತಪಟ್ಟವರು ಮುಂಬೈ ಮೂಲದವರು ಎನ್ನಲಾಗಿದೆ. ಮೃತರು ಖಾಸಗಿ ಬಸ್ ನಲ್ಲಿ ಮುಂಬಯಿಯಿಂದ ಹಂಪಿಗೆ ಪ್ರಯಾಣಿಸುತ್ತಿದ್ದರು. ವಿಶ್ವನಾಥ್‌(75) ದಿನಕರ್‌ ರಮೇಶ್‌ ಜಯಪಾಲ್‌ (70), ಸುಮೇಧಾ(65) ಲಾಹು(65) ಸುಚಿತ್ರಾ (65), ದಿನಕರ್‌(74) ಮೃತ ದುರ್ದೈವಿಗಳು.
ಅಪಘಾತದ ತೀವ್ರತೆಗೆ ಬಸ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ಸೇರಿಸಲಾಗಿದೆ. ಅಣ್ಣಿಗೇರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ