ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೈಸೂರು ಮೇಯರ್ ಆಗಿ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಆಗಿ ಶಫಿ ಅಹ್ಮದ್ ಆಯ್ಕೆ

ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮೇಯರ್ ಆಗಿ ಕಾಂಗ್ರೆಸ್ ನ ಪುಷ್ಪಲತಾ ಜಗನ್ನಾಥ್ ..

ಮೈಸೂರು ಮಹಾನಗರ ಪಾಲಿಕೆ
Shilpa D
Updated On : 17 Nov 2018, 5:01 am
ಮೈಸೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮೇಯರ್ ಆಗಿ ಕಾಂಗ್ರೆಸ್  ನ ಪುಷ್ಪಲತಾ ಜಗನ್ನಾಥ್ ಹಾಗೂ ಉಪ ಮೇಯರ್ ಆಗಿ ಜೆಡಿಎಸ್ ನ ಶಫಿ ಅಹ್ಮದ್ ಆಯ್ಕೆ ಗೊಂಡಿದ್ದಾರೆ.
ಇಂದು ಮೈಸೂರು ಮಹನಾಗರ ಪಾಲಿಕೆ ಆವರಣದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಪುಷ್ಟಲತಾ ಪರ 48 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರಿಗೆ 24 ಮತಗಳು ಚಲಾವಣೆಯಾಗಿವೆ.  ಕೈ ಮೇಲೆ ಎತ್ತುವ ಮೂಲಕ ಸದಸ್ಯರು ತಮ್ಮ ಮತ ಚಲಾಯಿಸಿದರು.
ಇನ್ನೂ ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ನ ಶಫಿ ಅಹ್ಮದ್ ಅವರ ಪರ 48 ಮತಗಳು ಹಾಗೂ ಬಿಜೆಪಿಯ ಸತೀಶ್ ಅವರಿಗೆ 24 ಮತಗಳು ಚಲಾವಣೆಯಾಗಿವೆ,

Advertisement

Advertisement

ಮೈಸೂರು ಮೇಯರ್ ಗದ್ದುಗೆ ತಮಗೆ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು. ಅದರಂತೆ ಮೈಸೂರು ಪಾಲಿಕೆ ಕಾಂಗ್ರೆಸ್ ವಶವಾಗಿದೆ, ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸಿದ್ದಾರೆ. ಮೊದಲ 2 ವರ್ಷ ಮೇಯರ್ ಸ್ಥಾನ ಕಾಂಗ್ರೆಸ್​ಗೆ ನಂತರದ 3 ವರ್ಷ ಮೇಯರ್ ಸ್ಥಾನ ಜೆಡಿಎಸ್​ಗೆ ಎಂಬ ಒಪ್ಪಂದದ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಕಾಂಗ್ರೆಸ್​ಗೆ ಮೇಯರ್ ಪಟ್ಟ ಬಿಟ್ಟುಕೊಟ್ಟಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments