ರಾಜ್ಯ

ಬೆಂಗಳೂರು: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಎಂ. ಫಾರೂಕ್ ನಿಧನ

Raghavendra Adiga
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಂ.ಎಂ ಫಾರೂಕ್ಲ್ ಬುಧವಾರ ಬೆಳಿಗಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರನ್ನು ಅಗಲಿದ್ದು ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಬೆಂಗಳೂರು ಜಯಮಹಲ್ ನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ಹೇಳಿದೆ.
1943, ಆಗಸ್ಟ್ 17ರಂದು ಜನಿಸಿದ್ದ ನ್ಯಾಯಮೂರ್ತಿ ಫಾರೂಕ್ ಕಾಸರಗೋಡು ಹಾಗೂ ಬೆಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದು ಬೆಂಗಳೂರು ರೇಣುಕಾಚಾರ್ಯ ಕಾನೂನು ಕಾಲೇಜಿನಲ್ಲಿ ಪದವಿ ಪಡೆದಿದ್ದರು.
1968ರಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ್ದ ಫಾರೂಕ್ ಸುಮಾರು 45 ವರ್ಷಗಳ ಕಾಲ ಕಾನೂನು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಜಗನ್ನಾಥ ಶೆಟ್ಟಿ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರಲ್ಲಿ ಕಿರಿಯ ವಕೀಲರಾಗಿ ಕಾರ್ಯನಿರ್ವಹಿಸಿದ್ದರು.
1975ರಲ್ಲಿ ಝೈಕೋರ್ಟ್ ನಲ್ಲಿ ಸರ್ಕಾರಿ ವಕೀಲರಾಗಿ ನೇಮಕವಾಗಿದ್ದ ಫಾರೂಕ್ 1995 ಡಿಸೆಂಬರ್ 18ರಂದು ಹೈಕೋರ್ಟ್ ನ್ಯಾಯಮೂರ್ತಿಫ಼್ಗಳಾಗಿ ಅಧಿಕಾರ ಸ್ವೀಕರಿಸಿದ್ದರು.
ಹಲವು ಕಾನೂನು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಫಾರೂಕ್ ತಮ್ಮ ನಿವೃತ್ತಿಯವರೆಗೂ ಕರ್ನಾಟಕದ ನ್ಯಾಯಾಂಗ ಅಕಾಡಮಿಯ ಅಧ್ಯಕ್ಷರಾಗಿದ್ದರು. ಅಲ್ಲದ್ದೆ ಕರ್ನಾಟಕ ರಾಜ್ಯ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರಾಗಿಸಹ ಅವರು ಸೇವೆ ಸಲ್ಲಿಸಿದ್ದಾರೆ.
SCROLL FOR NEXT