ಸಂಗ್ರಹ ಚಿತ್ರ 
ರಾಜ್ಯ

ಆರ್'ಎಸ್ಎಸ್ ನಾಯಕ ಕಲ್ಲಡ್ಕ, ಸಂಸದ ನಳಿನ್ ವಿರುದ್ಧದ ಎಫ್ಐಆರ್ ರದ್ದು

ಕಳೆದ 2017ರಲ್ಲಿ ನಡೆದಿದ್ದ ಆರ್'ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಖಂಡಿಸಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಠನೆ ನಡೆಸಿದ ಹಾಗೂ ಸಭೆ ಹಮ್ಮಿಕೊಂಡು ಭಾಷಣ ಮಾಡಿದ್ದ ಆರೋ ಸಂಬಂಧ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಆರ್'ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್...

ಬೆಂಗಳೂರು: ಕಳೆದ 2017ರಲ್ಲಿ ನಡೆದಿದ್ದ ಆರ್'ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಖಂಡಿಸಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಠನೆ ನಡೆಸಿದ ಹಾಗೂ ಸಭೆ ಹಮ್ಮಿಕೊಂಡು ಭಾಷಣ ಮಾಡಿದ್ದ ಆರೋ ಸಂಬಂಧ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಆರ್'ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಒಟ್ಟು 13 ಮಂದಿ ವಿರುದ್ಧ ಬಂಟ್ವಾಳ ಟೌನ್ ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ಮಂಗಳವಾರ ರದ್ದು ಪಡಿಸಿದೆ. 
ತಮ್ಮ  ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಕರಣದ ಆರೋಪಿಗಳಾಗಿದ್ದ 13 ಮಂದಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾ.ಅಶೋಕ್ ಜಿ.ನಿಜಗಣ್ಣನವರ್ ಅವರಿದ್ದ ಏಕಸದಸ್ಯ ಪೀಠ, ಈ ಆದೇಶವನ್ನು ನೀಡಿದೆ. 
ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದಿಸಿ, ನಿಷೇಧಾಜ್ಞೆ ಉಲ್ಲಂಘಿಸಿದರೆ ಜಿಲ್ಲಾಧಿಕಾರಿಯು ಸಂಬಂಧಪಟ್ಟ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಬೇಕು. ಆದರೆ, ಬಂಟ್ವಾಳ ಟೌನ್ ಠಾಣಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ ಪ್ರಕರಣ ದಾಖಲಿಸುವುಲ್ಲಿ ಪೊಲೀಸರು ಕಾನೂನು ಲೋಪ ಮಾಡಿದ್ದಾರೆ. 
ಇನ್ನು ಪ್ರತಿಭಟನೆ ನಡೆಸುವುದು ಸಂವಿಧಾನದತ್ತವಾದ ಮೂಲಭೂತ ಹಕ್ಕು. ಆದ್ದರಿಂದ ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಪಡಿಸಬೇಕೆಂದು ಕೋರಿದರು. ಈ ವಾದ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಪಡಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ