ರೈತರೊಂದಿದೆ ಸಂಧಾನ ಮಾತುಕತೆ ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ 
ರಾಜ್ಯ

ರೈತರ ಮನವೊಲಿಸುವಲ್ಲಿ ಯಶಸ್ವಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಎಚ್ಚರಿಕೆ ನೀಡಿದ ಸಿಎಂ

ಕಾರ್ಖಾನೆಗಳು ನೀಡಬೇಕಾಗಿರುವ ಕಬ್ಬಿನ ಬಾಕಿ ಹಣಕ್ಕಾಗಿ ಹೊರಾಟಕ್ಕಿಳಿದಿರುವ ರೈತರೊಂದಿಗೆ ಮಂಗಳವಾರ 6 ಗಂಟೆಗಳಿಗೂ ಹೆಚ್ಚು ಕಾಲ ವಿಧಾನಸೌಧಲ್ಲಿ ಮ್ಯಾರಥಾನ್ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ...

ಬೆಂಗಳೂರು: ಕಾರ್ಖಾನೆಗಳು ನೀಡಬೇಕಾಗಿರುವ ಕಬ್ಬಿನ ಬಾಕಿ ಹಣಕ್ಕಾಗಿ ಹೊರಾಟಕ್ಕಿಳಿದಿರುವ ರೈತರೊಂದಿಗೆ ಮಂಗಳವಾರ 6 ಗಂಟೆಗಳಿಗೂ ಹೆಚ್ಚು ಕಾಲ ವಿಧಾನಸೌಧಲ್ಲಿ ಮ್ಯಾರಥಾನ್ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರೈತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಎಚ್ಚರಿಕೆ ನೀಡಿರುವ ಕುಮಾರಸ್ವಾಮಿಯವರು ಹಿಂದಿನ ಎಫ್ಆರ್'ಪಿ ದರದಂತೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ರೂ.36.65 ಕೋಟಿಯನ್ನು 15 ದಿನಗಳಲ್ಲಿ ಒಂದೇ ಕಂತಿನಲ್ಲಿ ರೈತರಿಗೆ ಪಾವತಿಸಬೇಕೆಂದು ಸೂಚನೆ ನೀಡಿದ್ದಾರೆ.
ರೈತರೊಂದಿಗೆ ನೇರ ಮಾತುಕತೆ ಮೂಲಕ ಖರೀದಿ ಮಾಡಿರುವ ಸಂಬಂಧ ಬಾಕಿ ಉಳಿಸಿಕೊಂಡಿರುವ ಸುಮಾರು ರೂ.450 ಕೋಟಿ ಪಾವತಿ ಬಗ್ಗೆ ನ.22ರೊಳಗಾಗಿ ಕಾರ್ಖಾನೆಗಳ ಮಾಲೀಕರ ಜೊತೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು. ಈ ವೇಳೆ ರೈತರಿಗೆ ಸಂಪೂರ್ಣ ಹಣ ಪಾವತಿಗೆ ಗಡುವು ವಿಧಿಸಬೇಕೆಂಬ ನಿರ್ಧಾರಗಳನ್ನೂ ಸಭೆಯಲ್ಲಿ ಕೈಗೊಳ್ಳಲಾಗಿದೆ. 
ಸಭೆಗೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಆಗಮಿಸದ ಕಾರಣ ಪ್ರತಿನಿಧಿಗಳು ಹಣಕಾಸು ವಿಚಾರದ ಜವಾಬ್ದಾರಿ ತೆಗೆದುಕೊಂಡಿಲ್ಲ. ಹೀಗಾಗಿ ರೈತರ ಒಟ್ಟು ಬಾಕಿ ಪಾವತಿ ಬಗ್ಗೆ ನ.22ರೊಳಗಾಗಿ ನೇರವಾಗಿ ಮಾಲೀಕರ ಜೊತೆಗೆ ಸಭೆ ನಡೆಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. 
ಉಳಿದಂತೆ ಕೇಂದ್ರ ಸರ್ಕಾರ ನಿಗದಿ ಮಾಡಿರುವ ರೂ.2,750 ಎಫ್ಆರ್'ಪಿ ದರದ ಆಧಾರದಲ್ಲಿ ಕಬ್ಬು ಖರೀದಿಗೆ ಆದೇಶ ಮಾಡಿದ್ದು, ನಾಳೆಯಿಂದಲೇ ಕಬ್ಬು ಕಟಾವು ಮಾಡುವಂತೆ ಸೂಚನೆ ನೀಡಿದ್ದೇನೆಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT