ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಲಾರಿ-ಬೊಲೆರೊ ಅಪಘಾತದಲ್ಲಿ ಐವರು ಸಾವು, ಇಬ್ಬರಿಗೆ ಗಂಭೀರ ಗಾಯ

ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ...

ವಿಜಯಪುರ: ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.

ಏಳು ಮಂದಿ ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ಬೊಲೆರೋ ಪಿಕ್ಅಪ್ ವಾಹನ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕ ಮತ್ತು ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲಾ ಏಳು ಮಂದಿ ದಿನಗೂಲಿ ನೌಕರರು ಪುಣೆಗೆ ಸೇರಿದವರಾಗಿದ್ದಾರೆ.ಇವರು ವಿಜಯಪುರ ಮತ್ತು ಬಾಗಲಕೋಟೆ ಮಧ್ಯೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಸ್ತೆ ದ್ವಿಗುಣಗೊಳಿಸುವ ಕಾಮಗಾರಿಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಮೃತಪಟ್ಟವರನ್ನು ಗುರುತಿಸಬೇಕಾಗಿದ್ದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೀಗೂ ಉಂಟೆ?: BJP ಶಾಸಕನ ಬಂಗಲೆ ತೊಳೆಯಲು ಹೋದ ಅಗ್ನಿಶಾಮಕ ವಾಹನ; ವಿಡಿಯೋ ವೈರಲ್‌ ಬೆನ್ನಲ್ಲೇ ₹2,700 ದಂಡ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ