ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ 
ರಾಜ್ಯ

ನೈಸ್ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಒತ್ತಾಯ

ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಮತ್ತು ಅದರ ಪ್ರಚಾರಕ ಕಂಪೆನಿ ...

ಬೆಂಗಳೂರು: ಬೆಂಗಳೂರು ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಮತ್ತು ಅದರ ಪ್ರಚಾರಕ ಕಂಪೆನಿ ನೈಸ್ (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರಾಜೆಕ್ಟ್ )ವಿರುದ್ಧ ಪ್ರತಿಭಟನೆ ಹಿಂತತೆಗೆದುಕೊಳ್ಳುವ ಇಂಗಿತವನ್ನು ಎರಡು ವರ್ಷಗಳ ಹಿಂದೆ ವ್ಯಕ್ತಪಡಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಇದೀಗ ಮತ್ತೆ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳಲು ಮುಂದಾಗಿದ್ದಾರೆ.

ಹೊಸಕೆರೆಹಳ್ಳಿ ಲೇ ಔಟ್ ಹತ್ತಿರ ನಿವಾಸಿಗಳ ಸಂಕಷ್ಟಕ್ಕೆ ನೈಸ್ ಸಂಸ್ಥೆಯೇ ಕಾರಣ ಎಂದು ಆರೋಪಿಸಿರುವ ದೇವೇಗೌಡ, ವಸಚಿ ಸಮಿತಿ ವರದಿಯ ಶಿಫಾರಸಿನ ಆಧಾರದ ಮೇಲೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ನೈಸ್ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನ ಹೊಸಕೆರೆಹಳ್ಳಿಯ ಹತ್ತಿರ ಪ್ರಮೋದ್ ಲೇ ಔಟ್ ನ ನಿವಾಸಿಗಳನ್ನು ದೇವೇಗೌಡರು ನಿನ್ನೆ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ನಿವಾಸಿಗಳು ತಮಗೆ ನೈಸ್ ಅಧಿಕಾರಿಗಳಿಂದ ನಿತ್ಯ ಕಿರುಕುಳ ಉಂಟಾಗುತ್ತಿರುವುದಲ್ಲದೆ ಮೂಲಭೂತ ಸೌಕರ್ಯಗಳಿಗೂ ಇಲ್ಲಿ ಕೊರತೆಯಿದೆ ಎಂದು ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದರು.

ಪ್ರಮೋದ ಲೇ ಔಟ್ ನಲ್ಲಿ 17 ಎಕರೆ ಮತ್ತು ಹೊಸಕೆರೆಹಳ್ಳಿಯಲ್ಲಿ 50 ಎಕರೆಯನ್ನು ನೈಸ್ ರಸ್ತೆಗೆ ವಶಪಡಿಸಿಕೊಳ್ಳಲಾಗಿತ್ತು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಭೂಮಿ ಕಳೆದುಕೊಂಡವರಿಗೆ ಬೇರೆ ಕಡೆ ಭೂಮಿ ನೀಡಲು ಸಾಧ್ಯವಿಲ್ಲ ಎಂದು ಘೋಷಿಸಿದ್ದರು. ಬೇರೆ ಬೇರೆ ಮುಖ್ಯಮಂತ್ರಿಗಳ ಆಳ್ವಿಕೆ ಸಮಯದಲ್ಲಿ ನಡೆದ ಅಕ್ರಮಗಳ ಬಗ್ಗೆ ನನಗೆ ಗೊತ್ತಿದೆ ಎಂದು ದೇವೇಗೌಡರು ಗುಡುಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ