ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಯೋಜನೆಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿರುವ ಬೆನ್ನಲ್ಲೇ ಯೋಜನೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿಯವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಯಾರು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ, ಕೃಷ್ಣರಾಜಸಾಗರ ಜಲಾಶಯದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಯೋಜನೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.
ಯೋಜನೆಯಿಂದ ಕೆಆರ್'ಎಸ್ ಜಲಾಶಯಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳುವ ಎಲ್ಲಾ ವಿರೋಧಿಗಳು ನನ್ನೊಂದಿಗೆ ಚರ್ಚೆಗೆ ಬರಲಿ. ಸಮಗ್ರ ತಾಂತ್ರಿಕ ವಿವರದೊಂದಿಗೆ ಅವರ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮೊದಲ ಹಂತದಲ್ಲಿ ಕೆಆರ್'ಎಸ್, ಎರಡನೇ ಹಂತದಲ್ಲಿ ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಮಾಡಲಾಗುತ್ತದೆ ಎಂದಿದ್ದಾರೆ.
ಪ್ರತಿ ಜಲಾಶಯಗಳ ಸುತ್ತಮುತ್ತಲಿನ ಪ್ರದೇಶವನ್ನು ಪ್ರವಾಸೋದ್ಯಮಕ್ಕೆ ಬಳಸಿ ಉದ್ಯೋಗ ಸೃಷ್ಟಿಸಲಾಗುತ್ತದೆ. ಕೆಆರ್'ಎಸ್ ಡಿಸ್ನಿ ಯೋಜನೆ ಮೊದಲ ಹಂತದ ಕಾಮಗಾರಿ 2020ಕ್ಕೆ. 2ನೇ ಹಂತದ ಕಾಮಗಾರಿ 2022ಕ್ಕೆ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics