ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್: ವರ್ಗಾವಣೆಗೊಂಡ ಪೊಲೀಸ್ ಕುರಿತು ಮಾಹಿತಿ ನೀಡಿ-ಸರ್ಕಾರಕ್ಕೆ ಹೈಕೋರ್ಟ್

ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ವರ್ಗಾವಣೆ ಗೊಂಡಿರುವ ಬ್ಯಾಟರಾಯಪುರ ಪೊಲೀಸ್ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶನಿವಾರ ಆದೇಶಿಸಿದೆ...

ಡಿ.ಕೆ.ಶಿವಕುಮಾರ್
Manjula VN
Updated On : 25 Nov 2018, 10:51 am
ಬೆಂಗಳೂರು: ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ವರ್ಗಾವಣೆ ಗೊಂಡಿರುವ ಬ್ಯಾಟರಾಯಪುರ ಪೊಲೀಸ್ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶನಿವಾರ ಆದೇಶಿಸಿದೆ. 
ನಗರ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ತೆರವಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಎಸ್. ಸುಜಾತಾ ಅವರು, ಸರ್ಕಾರಿ ಪರ ವಕೀಲ ಉದಯ್ ಹೊಳ್ಳ ಅವರಿಗೆ ಈ ಸೂಚನೆ ನೀಡಿದ್ದಾರೆ. 
ನೋಟಿಸ್ ಜಾರಿಗೊಳಿಸಿದ್ದರೂ, ಅನಧಿಕೃತ ಜಾಹೀರಾತನ್ನು ತೆರವುಗೊಳಿಸಿಲ್ಲದ ಹಿನ್ನಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. 

Advertisement

Advertisement

ವಿಚಾರಣೆ ವೇಳೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು ಮಾಡಿದ ಕಾರಣಕ್ಕೆ ಸಬ್ ಇನ್ಸ್ ಪೆಕ್ಟರ್'ನ್ನು ವರ್ಗಾವಣೆ ಮಾಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡನೆ ಮಾಡಿದರು. ಸಚಿವ ಹಾಗೂ ಇತರರ ವಿರುದ್ಧ ಚಾರ್ಜ್ ಶೀಟ್ ದಾಖಲು ಮಾಡಲುವ ಬದಲು ಬಿ ರಿಪೋರ್ಟ್ ಸಲ್ಲಿಸಲಾಗಿದೆ. 
ಈ ವೇಳೆ ಎಜಿಗೆ ಸೂಚನೆ ನೀಡಿದ ನ್ಯಾಯಾಲಯ, ಅಧಿಕಾರಿಯ ವರ್ಗಾವಣೆ ಕುರಿತ ಅಫಿಡವಿಟ್ ಕೆಲ ಸಾಲುಗಳನ್ನು ಓದುವಂತೆ ಸೂಚಿಸಿತು. 
ಅಧಿಕಾರಿಯ ವರ್ಗಾವಣೆ ಕುರಿತಂತೆ ನಮಗೆ ಸರ್ಕಾರದಿಂದ ಪ್ರತಿಕ್ರಿಯೆ ನೀಡಬೇಕು. ಕಾನೂನು ಪ್ರಕಾರ ತಮ್ಮ ಕರ್ತವ್ಯವನ್ನು ನಿರ್ವಹಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡವರ ಮೇಲೆ ನ್ಯಾಯಾಲಯ ಕಣ್ಣಿಡುತ್ತದೆ ಎಂದು ಹೇಳಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಡಿ.1ಕ್ಕೆ ಮುಂದೂಡಿತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement