ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಇಬ್ಬರು ಅಪ್ರಾಪ್ತರು ಸೇರಿ 6 ಮಂದಿ ಮೀನುಗಾರರಿಂದ ಯುವತಿ ಮೇಲೆ ಅತ್ಯಾಚಾರ

ಯುವತಿ ಮೇಲೆ ಮೀನುಗಾರರ ಗುಂಪೊಂದು ಅತ್ಯಾಚಾರ ನಡೆಸಿದ ಪ್ರಕರಣ ಮಂಗಳೂರು ಸಮೀಪ ...

ಮಂಗಳೂರು: ಯುವತಿ ಮೇಲೆ ಮೀನುಗಾರರ ಗುಂಪೊಂದು ಅತ್ಯಾಚಾರ ನಡೆಸಿದ ಪ್ರಕರಣ ಮಂಗಳೂರು ಸಮೀಪ ತೋಟ ಬೆಂಗ್ರೆ ಎಂಬಲ್ಲಿ ನಡೆದಿದೆ.

ವಾರದ ಹಿಂದೆ ಈ ಘಟನೆ ನಡೆದಿದ್ದರೂ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

ಯುವತಿ ಮೇಲೆ ಆರು ಮಂದಿ ಮೀನುಗಾರರು ತೋಟ ಬೆಂಗ್ರೆ ಎಂಬಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಖಚಿತಪಡಿಸಿದ್ದಾರೆ.
ವಾರದ ಹಿಂದೆ ಈ ಘಟನೆ ನಡೆದಿದ್ದರೂ ಕೂಡ ಮಾಹಿತಿ ಪಡೆಯುವಾಗ ವಿಳಂಬವಾಯಿತು. ಯುವತಿಯನ್ನು ಪತ್ತೆಹಚ್ಚಿದಾಗ ಪೊಲೀಸರಿಗೆ ನಿನ್ನೆ ಕಂಡುಬಂದಿದ್ದಾಳೆ ಎಂದು ಸುರೇಶ್ ಪತ್ರಿಕೆಗೆ ತಿಳಿಸಿದ್ದಾರೆ.

ಯುವತಿಯ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ. ಆರು ಮಂದಿ ಶಂಕಿತ ಆರೋಪಿಗಳನ್ನು ವಶಪಡಿಸಲಾಗಿದ್ದು ಶೀಘ್ರವೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಸುರೇಶ್ ತಿಳಿಸಿದರು.

ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಯುವತಿ ತನ್ನ ಮತ್ತೊಬ್ಬ ಸ್ನೇಹಿತೆ ಜೊತೆ ಇದ್ದಳು. ಈ ಸಂದರ್ಭದಲ್ಲಿ ಆರು ಮಂದಿ ದುಷ್ಕರ್ಮಿಗಳ ಗುಂಪು ಎರಗಿ ನಗರದ ಸೂಕ್ಷ್ಮ ಪ್ರದೇಶದಲ್ಲಿ ಅತ್ಯಾಚಾರವೆಸಗಿದೆ. ಘಟನೆಗೆ ಯಾವುದೇ ಅಂತರ ಧರ್ಮೀಯ ಕಲಹ ಸಾಧ್ಯತೆಯನ್ನು ಪೊಲೀಸರು ತಳ್ಳಿ ಹಾಕಿದ್ದಾರೆ.

ಯುವತಿ ಮತ್ತು ಶಂಕಿತರು ಒಂದೇ ಸಮುದಾಯಕ್ಕೆ ಸೇರಿದವರಾಗಿರುವುದು ಇಲ್ಲಿ ಮತ್ತೊಂದು ವಿಶೇಷ ಸಂಗತಿ.

ಶಂಕಿತರಲ್ಲಿ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಕೂಡ ಇದ್ದಾರೆ. ಎಲ್ಲರೂ ತೋಟ ಬೆಂಗ್ರೆಯ ಮೀನುಗಾರರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!